ಚೈಬಾಸಾ (ಜಾರ್ಖಂಡ್): ಜಾರ್ಖಂಡ್ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮೂವರು ಮಾವೋವಾದಿಗಳನ್ನು ಹೊಡೆದುರುಳಿಸಿವೆ. ನಿಷೇಧಿತ ಸಿಪಿಐ (ಮಾವೋವಾದಿ) ಬಣದ ಸದಸ್ಯರು ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯ ಚಿರುಂಗ್ರೆಡಾ ಗ್ರಾಮದ ಹತ್ತಿರ ಅರಣ್ಯವೊಂದರಲ್ಲಿ ಕಾಣಿಸಿಕೊಂಡಿದ್ದಾರೆ ಎಂಬ ಖಚಿತ ಮಾಹಿತಿ ಭದ್ರತಾ ಪಡೆಗಳಿಗೆ ಲಭಿಸಿತ್ತು.
ಮಾಹಿತಿಯ ಆಧಾರದಲ್ಲಿ ಸಿಆರ್ಪಿಎಫ್ ಹಾಗೂ ಜಿಲ್ಲಾ ಪೊಲೀಸರ ತಂಡ ಮಾವೋವಾದಿಗಳ ಸ್ಥಳಕ್ಕೆ ಧಾವಿಸಿತ್ತು. ಈ ಸಂದರ್ಭದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಮಾವೋವಾದಿಗಳು ಸಾವನ್ನಪ್ಪಿದ್ದಾರೆ. ಗುಂಡಿನ ಚಕಮಕಿ ನಡೆದ ಸ್ಥಳದಿಂದ ಮದ್ದು, ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎಸ್ಪಿ ಇಂದ್ರಜೀತ ಮಹತಾ ತಿಳಿಸಿದ್ದಾರೆ. ಬಲ್ಲ ಮೂಲಗಳ ಪ್ರಕಾರ ನಾಲ್ಕರಿಂದ ಐದು ಜನ ಮಾವೋವಾದಿಗಳು ಹತರಾಗಿರುವ ಸಾಧ್ಯತೆಯಿದೆ ಎನ್ನಲಾಗಿದೆ.
ಕಳೆದ ಮಾ.17 ರಂದು ಛತ್ತೀಸ್ ಗಢದ ಸುಕ್ಮಾ ಜಿಲ್ಲೆಯಲ್ಲಿ ಮಾವೋವಾದಿಗಳೊಂದಿಗೆ ನಡೆದ ಎನ್ಕೌಂಟರ್ನಲ್ಲಿ 17 ಜನ ಭದ್ರತಾ ಪಡೆ ಜವಾನರು ಮೃತಪಟ್ಟು, 15 ಜನ ಪೊಲೀಸರು ಗಂಭೀರ ಗಾಯಗೊಂಡಿದ್ದರು.