ಶೊಪಿಯಾನ್: ಇಲ್ಲಿನ ಕೆಲ್ಲೆರ್ ಏರಿಯಾದಲ್ಲಿ ಭದ್ರತಾ ಪಡೆ ಮಿಂಚಿನ ಕಾರ್ಯಾಚರಣೆ ನಡೆಸಿ, ಮೂವರು ಉಗ್ರರನ್ನು ಹೊಡೆದುರುಳಿಸಿದ್ದಾರೆ.
ಬೆಳಗ್ಗೆಯಿಂದ ಉಗ್ರರು ಹಾಗೂ ಭದ್ರತಾ ಪಡೆ ನಡುವೆ ಗುಂಡಿನ ಚಕಮಕಿ ನಡೆದಿತ್ತು. ಸಿಆರ್ಪಿಎಫ್, ಸೇನೆ ಹಾಗೂ ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ಮೂವರು ಉಗ್ರರನ್ನು ಬೇಟೆಯಾಡಿದ್ದಾರೆ.
ಇಬ್ಬರು ಉಗ್ರರ ಕಳೆಬರವನ್ನು ಪತ್ತೆ ಮಾಡಲಾಗಿದ್ದು, ಅವರ ಬಳಿಯಿದ್ದ ಶಸ್ತ್ರಾಸ್ತ್ರಗಳನ್ನು ಸೈನಿಕರು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.