ETV Bharat / bharat

ಶ್ರೀನಗರ ಎನ್​​ಕೌಂಟರ್​: ಮೂವರು ಉಗ್ರರ ಹತ್ಯೆ, ಓರ್ವ ಪೊಲೀಸ್​ ಹುತಾತ್ಮ

author img

By

Published : Aug 30, 2020, 4:32 PM IST

ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ಹೊರವಲಯದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಲಷ್ಕರ್​- ಇ -ತೊಯ್ಬಾ ಸಂಘಟನೆಯ ಮೂವರು ಉಗ್ರರನ್ನು ಹೊಡೆದುರುಳಿಸಲಾಗಿದೆ. ಘಟನೆಯಲ್ಲಿ ಎಎಸ್​ಐ ಬಾಬು ರಾಮ್​ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಪೊಲೀಸ್ ಮಹಾನಿರ್ದೇಶಕ ದಿಲ್ಬಾಗ್ ಸಿಂಗ್ ಮಾಹಿತಿ ನೀಡಿದ್ದಾರೆ.

Srinagar encounter
ಶ್ರೀನಗರ ಎನ್​​ಕೌಂಟರ್

ಶ್ರೀನಗರ: ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಲಷ್ಕರ್​- ಇ -ತೊಯ್ಬಾ ಸಂಘಟನೆಯ ಮೂವರು ಉಗ್ರರನ್ನು ಹೊಡೆದುರುಳಿಸಲಾಗಿದೆ. ಆದರೆ ಘಟನೆಯಲ್ಲಿ ಸಹಾಯಕ ಪೊಲೀಸ್ ಇನ್ಸ್‌ಪೆಕ್ಟರ್ ಹುತಾತ್ಮರಾಗಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ಹೊರವಲಯದಲ್ಲಿ ಮನೆಯೊಂದರಲ್ಲಿ ಉಗ್ರರು ಅಡಗಿಕೊಂಡಿರುವ ಸಂಶಯದ ಮೇರೆಗೆ ಭದ್ರತಾ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಮನೆಯಲ್ಲಿದ್ದ ಉಗ್ರರು ಗುಂಡು ಹಾರಿಸಿದ್ದಾರೆ. ಈ ಸಂದರ್ಭ ಎನ್​ಕೌಂಟರ್​ ನಡೆಸಿದ ಭದ್ರತಾ ಪಡೆ ಮೂವರು ಉಗ್ರರನ್ನು ಹತ್ಯೆಗೈದಿದೆ. ಘಟನೆಯಲ್ಲಿ ಎಎಸ್​ಐ ಬಾಬು ರಾಮ್​ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಪೊಲೀಸ್ ಮಹಾನಿರ್ದೇಶಕ ದಿಲ್ಬಾಗ್ ಸಿಂಗ್ ಮಾಹಿತಿ ನೀಡಿದ್ದಾರೆ.

ಲಷ್ಕರ್​- ಇ -ತೊಯ್ಬಾದ ಮೃತ ಮೂವರು ಉಗ್ರರ ಪೈಕಿ ಓರ್ವನು ಸಂಘಟನೆಯ ಕಮಾಂಡರ್​ ಆಗಿದ್ದು, ಕಳೆದೊಂದು ವರ್ಷದಿಂದ ಶ್ರೀನಗರದಲ್ಲಿ ಅಹಿತಕರ ಕೃತ್ಯಗಳಲ್ಲಿ ತೊಡಗಿಸಿಕೊಂಡಿದ್ದನು ಎಂದು ದಿಲ್ಬಾಗ್ ಸಿಂಗ್ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.