ETV Bharat / bharat

ಪಾಲ್ಘರ್ ಸಾಧುಗಳ ಮೇಲಿನ ಹಲ್ಲೆ ಪ್ರಕರಣ: ಕೋರ್ಟ್​​​​​​​ಗೆ​​​​​​​​​​​​​​​​ ಚಾರ್ಜ್​​​​​ಶೀಟ್ ಸಲ್ಲಿಸಿದ ಸಿಐಡಿ - ಪಾಲ್ಘರ್ ಸಾಧುಗಳ ಮೇಲಿನ ಹಲ್ಲೆ ಪ್ರಕರಣ

ಪಾಲ್ಘರ್​​​​​​​​​​​ನಲ್ಲಿ ನಡೆದ ಸಾಧುಗಳ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 126 ಆರೋಪಿಗಳ ವಿರುದ್ಧ ಮಹಾರಾಷ್ಟ್ರ ಸಿಐಡಿ ಸ್ಥಳೀಯ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದೆ.

Lyching
Lyching
author img

By

Published : Jul 16, 2020, 11:39 AM IST

ಪಾಲ್ಘರ್: ಪಾಲ್ಘರ್​​​​​ನ ಸಾಧುಗಳ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 126 ಆರೋಪಿಗಳ ವಿರುದ್ಧ ಮಹಾರಾಷ್ಟ್ರ ಸಿಐಡಿ ನ್ಯಾಯಾಲಯದಲ್ಲಿ ಚಾರ್ಜ್‌ಶೀಟ್ ಸಲ್ಲಿಸಿದೆ.

ಮುಂಬೈಗೆ ಹೊಂದಿಕೊಂಡಿರುವ ಪಾಲ್ಘರ್ ಜಿಲ್ಲೆಯ ದಹನು ತಾಲೂಕಿನಲ್ಲಿರುವ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಸಿಐಡಿ 4,955 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದೆ.

ಪ್ರಕರಣದ ತನಿಖೆ ನಡೆಸಿದ ಸಿಐಡಿ 808 ಶಂಕಿತರು ಮತ್ತು 118 ಸಾಕ್ಷಿಗಳನ್ನು ವಿಚಾರಣೆಗೆ ಒಳಪಡಿಸಿ ಆರೋಪಿಗಳ ವಿರುದ್ಧ ಬಲವಾದ ಸಾಕ್ಷ್ಯಗಳನ್ನು ಸಂಗ್ರಹಿಸಿದೆ. ಈವರೆಗೆ ಒಟ್ಟು 11 ಬಾಲಾಪರಾಧಿಗಳು ಸೇರಿದಂತೆ 154 ಜನರನ್ನು ಬಂಧಿಸಲಾಗಿದೆ. ಇಲ್ಲಿಯವರೆಗೆ ಯಾವುದೇ ಆರೋಪಿಗಳನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಿಲ್ಲ ಎಂದು ಪ್ರಕಟಣೆ ತಿಳಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ್ದ ಅಧಿಕಾರಿ ವಿಜಯ್ ಪವಾರ್ ಅವರು 126 ಆರೋಪಿಗಳ ವಿರುದ್ಧ ದಹನುವಿನ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ.

ಘಟನೆಯ ವಿವರ:

ಏಪ್ರಿಲ್ 16 ರಂದು ಇಬ್ಬರು ಸನ್ಯಾಸಿಗಳು ಮತ್ತು ಅವರ ಚಾಲಕರೊಂದಿಗೆ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಪಾಲ್ಘರ್ ಜಿಲ್ಲೆಯ ಗಡ್ಚಿಂಚಲೆ ಗ್ರಾಮದಲ್ಲಿ ಜನ ಸಮೂಹವೊಂದು ಮಕ್ಕಳ ಕಳ್ಳರೆಂದು ಭಾವಿಸಿ ಸಾಧುಗಳ ಮೇಲೆ ಹಲ್ಲೆ ನಡೆಸಿ ಹತ್ಯೆ ಮಾಡಿದ್ದರು. ಬಳಿಕ ಈ ಪ್ರಕರಣವನ್ನು ತನಿಖೆಗಾಗಿ ಸಿಐಡಿಗೆ ಹಸ್ತಾಂತರಿಸಲಾಗಿತ್ತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.