ETV Bharat / bharat

ಉಗ್ರರ ವಿರುದ್ಧದ ಕಾರ್ಯಾಚರಣೆ: ಮೂವರು ಭಯೋತ್ಪಾದಕರ ಹೊಡೆದುರುಳಿಸಿದ ಸೇನೆ - ಜಮ್ಮು-ಕಾಶ್ಮೀರ

ಉಗ್ರರ ವಿರುದ್ಧದ ಕಾರ್ಯಾಚರಣೆ ವೇಳೆ ಮೂವರು ಭಯೋತ್ಪಾದಕರ ಹೊಡೆದುರುಳಿಸುವಲ್ಲಿ ಸೇನೆ ಯಶಸ್ವಿಯಾಗಿದೆ.

Three terrorists killed by security forces

author img

By

Published : Sep 4, 2020, 9:22 PM IST

ಬಾರಾಮುಲ್ಲಾ (ಜಮ್ಮು-ಕಾಶ್ಮೀರ): ಭಾರತೀಯ ಸೇನೆ- ಉಗ್ರರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸುವಲ್ಲಿ ಯೋಧರು ಯಶಸ್ವಿಯಾಗಿದ್ದಾರೆ.

ಬೆಳ್ಳಂಬೆಳ್ಳಗೆ ಬಾರಾಮುಲ್ಲಾದಲ್ಲಿ ಕಾರ್ಯಾಚರಣೆ ನಡೆಸಿದ ವೇಳೆ ಉಗ್ರರು-ಯೋಧರ ನಡುವೆ ಗುಂಡಿನ ಕಾಳಗ ನಡೆದಿದೆ. ಈ ವೇಳೆ ಮೂವರು ಉಗ್ರರ ಬಲಿಯಾಗಿದ್ದಾರೆ. ಕಾರ್ಯಾಚರಣೆ ವೇಳೆ ಓರ್ವ ಸೇನಾಧಿಕಾರಿ ಹಾಗೂ ಇಬ್ಬರು ಯೋಧರಿಗೆ ಗಾಯಗಳಾಗಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಭಾರತೀಯ ಸೇನೆ ಮಾಹಿತಿ ನೀಡಿದೆ.

ಕಳೆದ ಕೆಲ ದಿನಗಳಿಂದ ಭಾರತೀಯ ಯೋಧರು-ಉಗ್ರರ ನಡುವೆ ನಿರಂತರವಾಗಿ ಗುಂಡಿನ ದಾಳಿ ನಡೆಯುತ್ತಿದ್ದು, ಭಯೋತ್ಪಾದಕರ ಸದೆಬಡೆಯುವಲ್ಲಿ ಭಾರತೀಯ ಸೈನಿಕರು ಯಶಸ್ವಿಯಾಗುತ್ತಿದ್ದಾರೆ. ಉಗ್ರರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶಕ್ಕೆ ಪಡೆದುಕೊಳ್ಳಲಾಗಿದ್ದು, ಕಳೆದ ಕೆಲ ದಿನಗಳಿಂದ ಈ ಪ್ರದೇಶಗಳಲ್ಲಿ ಹೆಚ್ಚಿನ ಉಗ್ರ ಸಂಬಂಧಿ ಚಟುವಟಿಕೆ ನಡೆಯುತ್ತಿವೆ ಎಂದು ತಿಳಿದು ಬಂದಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.