ETV Bharat / bharat

ಮೂರು ವರ್ಷದ ಬಾಲಕನಿಗೆ ಕೊರೊನಾ... ಭಾರತದಲ್ಲಿ 43ಕ್ಕೇರಿದ ಸೋಂಕಿತರ ಸಂಖ್ಯೆ! - ಕೇರಳದಲ್ಲಿ ಕೊರೊನಾ

ಇಡೀ ವಿಶ್ವವನ್ನೇ ಬೆಚ್ಚಿ ಬೀಳಿಸಿರುವ ಮಹಾಮಾರಿ ಕೊರೊನಾ ಭಾರತದಲ್ಲೂ ಇದೀಗ ವಿಸ್ತರಣೆಗೊಳ್ಳುತ್ತಿದ್ದು, ಕೇರಳದಲ್ಲಿ ಮೂರು ವರ್ಷದ ಮಗುವಿಗೆ ಕೊರೊನಾ ಕಾಣಿಸಿಕೊಂಡಿದೆ.

coronavirus
ಮಹಾಮಾರಿ ಕೊರೊನಾ
author img

By

Published : Mar 9, 2020, 11:55 AM IST

Updated : Mar 9, 2020, 3:44 PM IST

ಕೊಚ್ಚಿ(ಕೇರಳ): ಚೀನಾ, ಇಟಲಿಯಲ್ಲಿ ಸಾವಿರ ರೌದ್ರನರ್ತನವಾಡ್ತಿರುವ ಮಹಾಮಾರಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಭಾರತದಲ್ಲಿ ಏರಿಕೆಯಾಗ್ತಿದೆ. ಕೇರಳದಲ್ಲಿ ಇದೀಗ 3 ವರ್ಷದ ಬಾಲಕನೋರ್ವನಿಗೆ ವೈರಸ್​ ಕಾಣಿಸಿಕೊಂಡಿರುವುದಾಗಿ ವರದಿಯಾಗಿದೆ.

ಕಳೆದ ಕೆಲ ದಿನಗಳ ಹಿಂದೆ ಪೋಷಕರೊಂದಿಗೆ ಇಟಲಿಗೆ ತೆರಳಿದ್ದ ಬಾಲಕನಲ್ಲಿ ಈ ಲಕ್ಷಣಗಳು ಕಾಣಿಸಿಕೊಂಡಿದ್ದು, ಇದೀಗ ಆತನಿಗೆ ಎರ್ನಾಕುಲಮ್‌ನಲ್ಲಿರುವ ಮೆಡಿಕಲ್ ಕಾಲೇಜಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಿನ್ನೆ ಕೇರಳದಲ್ಲಿ ಒಂದೇ ಕುಟುಂಬದ ಐವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು.

ಇವರು ಇಟಲಿಯಿಂದ ಬಂದಿರುವ ಬಗ್ಗೆ ಯಾವುದೇ ಮಾಹಿತಿ ಇಲ್ಲದ ಕಾರಣ ವಿಮಾನ ನಿಲ್ದಾಣದಲ್ಲಿ ತಪಾಸಣೆ ಮಾಡಿರಲಿಲ್ಲ ಎಂದು ತಿಳಿದು ಬಂದಿದೆ. ದೇಶದಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಕಾರಣ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಯಾವ ರೀತಿಯ ಕ್ರಮ ಕೈಗೊಂಡಿವೆ ಎಂಬ ಪ್ರಶ್ನೆ ಉದ್ಭವವಾಗಿದೆ.

ಕೊರೊನಾ ವೈರಸ್​ ಕಾಣಿಸಿಕೊಂಡಿರುವ ಕಾರಣ ಪ್ರಧಾನಿ ನರೇಂದ್ರ ಮೋದಿ ಬಾಂಗ್ಲಾದೇಶದ ಪ್ರವಾಸ ಮೊಟಕುಗೊಳಿಸಿದ್ದಾರೆ ಎಂಬ ಮಾಹಿತಿ ಕೂಡ ಲಭ್ಯವಾಗಿದೆ.

ಇದೇ ವಿಷಯಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡಿರುವ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್​,ಕೊರೊನಾ ವೈರಸ್ದೆ​ ಹರಡದಂತೆ ದೆಹಲಿಯಲ್ಲಿ ಎಲ್ಲ ರೀತಿಯ ಕ್ರಮ ಕೈಗೊಂಡಿರುವುದಾಗಿ ಮಾಹಿತಿ ನೀಡಿದ್ದಾರೆ.

Last Updated : Mar 9, 2020, 3:44 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.