ದೆಹಲಿ: ಕೊರೊನಾ ವೈರಸ್ ಹರಡುವ ಭೀತಿಯಲ್ಲಿ ಮುಂದಿನ ಕೆಲ ದಿನಗಳಲ್ಲೇ ತಿಹಾರ್ ಜೈಲಿನ 3000 ಕೈದಿಗಳನ್ನು ಬಿಡುಗಡೆ ಮಾಡಬಹುದು ಎಂಬ ಮಾಹಿತಿ ದೊರೆತಿದೆ.
ಇವರಲ್ಲಿ 1500 ಬಿಡುಗಡೆಗೆ ಅರ್ಹ ಕೈದಿಗಳು ಹಾಗೂ 1500 ವಿಚಾರಣಾಧೀನ ಕೈದಿಗಳಾಗಿದ್ದಾರೆ. ಕೆಲವು ದಿನಗಳವರೆಗೆ ಪೆರೋಲ್ ಮತ್ತು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗುತ್ತದೆ ಎಂದು ದೆಹಲಿ ಸರ್ಕಾರ ಹೈಕೋರ್ಟ್ಗೆ ಮನವಿ ಸಲ್ಲಿಸಿರುವುದಾಗಿ ತಿಳಿದು ಬಂದಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.