ಚಂಡೀಗಢ: ಹರಿಯಾಣದ ಅದಂಪುರ್ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಟಿಕ್ ಟಾಕ್ ಸ್ಟಾರ್ ಸೋನಾಲಿ ಪೋಗಾಟ್ ಇಂದು ನಾಮಪತ್ರ ಸಲ್ಲಿಸಿದ್ರು.
ಬಿಜೆಪಿಯಲ್ಲಿ ಗುರುತಿಸಿಕೊಂಡಿರುವ ಸೋನಾಲಿಗೆ ಇದೇ ಮೊದಲ ಬಾರಿಗೆ ಪಕ್ಷ ಮಣೆ ಹಾಕಿದೆ. ಕಾಂಗ್ರೆಸ್ನ ಪ್ರಬಲ ಅಭ್ಯರ್ಥಿ ಕುಲದೀಪ್ ಬಿಷ್ಣೋಯ್ ವಿರುದ್ಧ ಇವರು ಕಣಕ್ಕಿಳಿದಿದ್ದಾರೆ. ಕಳೆದ 12 ವರ್ಷಗಳಿಂದ ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತೆಯಾಗಿ ದುಡಿದಿದ್ದೇನೆ. ಈ ಬಾರಿ ಚುನಾವಣೆಯಲ್ಲಿ ಗೆಲುವು ದಾಖಲಿಸುವುದಾಗಿ ಅವರುವಿಶ್ವಾಸ ವ್ಯಕ್ತಪಡಿಸಿದ್ರು.
90 ಕ್ಷೇತ್ರಗಳನ್ನೊಳಗೊಂಡ ಹರಿಯಾಣ ವಿಧಾನಸಭೆಗೆ ಅಕ್ಟೋಬರ್ 21ರಂದು ಮತದಾನ ನಡೆಯಲಿದ್ದು, 24ಕ್ಕೆ ಫಲಿತಾಂಶ ಹೊರಬೀಳಲಿದೆ.