ETV Bharat / bharat

ಸೋಂಕಿಗೆ ತೃಣಮೂಲ ಕಾಂಗ್ರೆಸ್​ ಶಾಸಕ ಬಲಿ: ಮಮತಾ ಬ್ಯಾನರ್ಜಿ ಸಂತಾಪ - ಮಮತಾ ಬ್ಯಾನರ್ಜಿ

ಜೂನ್​ ಆರಂಭದಲ್ಲಿ ತಮಿಳುನಾಡಿನ ಡಿಎಂಕೆ ಶಾಸಕ ಕೊರೊನಾ ಸೋಂಕಿಗೆ ಬಲಿಯಾಗಿದ್ದು, ಈಗ ತೃಣಮೂಲ ಕಾಂಗ್ರೆಸ್ ಶಾಸಕ ಕೊರೊನಾದಿಂದ ಮೃತಪಟ್ಟಿದ್ದಾರೆ.

TMC MLA Tamonash Ghosh
ತೃಣಮೂಲ ಕಾಂಗ್ರೆಸ್​​ನ ಶಾಸಕ ತಮೋನಾಶ್​ ಘೋಷ್
author img

By

Published : Jun 24, 2020, 12:54 PM IST

ಕೋಲ್ಕತ್ತಾ (ಪಶ್ಚಿಮ ಬಂಗಾಳ): ತೃಣಮೂಲ ಕಾಂಗ್ರೆಸ್​​ನ ಶಾಸಕ ತಮೋನಾಶ್​ ಘೋಷ್​ ಕೊರೊನಾ ಸೋಂಕಿನಿಂದ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ.

ಮೂರು ಬಾರಿ ದಕ್ಷಿಣ 24 ಪರಗಣ ಜಿಲ್ಲೆಯ ಫಲ್ತಾ ವಿಧಾನಸಭಾ ಕ್ಷೇತ್ರದಿಂದ ಗೆದ್ದು ಶಾಸಕರಾಗಿದ್ದ ಘೋಷ್ ಅವ​ರಲ್ಲಿ ಹಿಂದಿನ ತಿಂಗಳು ಸೋಂಕು ದೃಢಪಟ್ಟಿತ್ತು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಾಗಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಇಹಲೋಕ ತ್ಯಜಿಸಿದ್ದಾರೆ.

  • Very, very sad. Tamonash Ghosh, 3-time MLA from Falta & party treasurer since 1998 had to leave us today. Been with us for over 35 years, he was dedicated to the cause of the people & party. He contributed much through his social work. (1/2)

    — Mamata Banerjee (@MamataOfficial) June 24, 2020 " class="align-text-top noRightClick twitterSection" data=" ">

ಈ ಕುರಿತು ಪ್ರತಿಕ್ರಿಯೆ ನೀಡಿರುವ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ, ಇದು ತುಂಬಾ ದುಃಖದ ವಿಚಾರ. ಜನರು ಮತ್ತು ಪಕ್ಷ ಹಾಗೂ ಸಮಾಜಕ್ಕೆ ಅವರ ಕೊಡುಗೆ ಅಪಾರ. ಅವರ ಕುಟುಂಬಕ್ಕೆ ದೇವರು ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

ಈ ತಿಂಗಳ ಆರಂಭದಲ್ಲಿ ತಮಿಳುನಾಡಿನ ಡಿಎಂಕೆ ಶಾಸಕ ಜೆ.ಅನ್ಬಳಗನ್​ ಕೊರೊನಾ ಸೋಂಕಿನಿಂದ ಚೆನ್ನೈ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.