ETV Bharat / bharat

ಜಲ್ಲಿಕಟ್ಟು ಪ್ರತಿಭಟನೆ ವೇಳೆ ದಾಖಲಾದ ಪ್ರಕರಣ ಹಿಂಪಡೆಯಲು ಮುಂದಾದ ತ. ನಾಡು ಸರ್ಕಾರ!

author img

By

Published : Feb 5, 2021, 6:06 PM IST

ಜಲ್ಲಿಕಟ್ಟು ಪ್ರತಿಭಟನೆಯ ಸಮಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ನಾವು ಹಲವಾರು ಪ್ರಕರಣಗಳನ್ನು ದಾಖಲಿಸಿದ್ದೇವೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸಾಮಿ ತಿಳಿಸಿದ್ದಾರೆ.

TN government to withdraw cases lodged during Jallikattu protest
ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸಾಮಿ

ತಮಿಳುನಾಡು: ಜಲ್ಲಿಕಟ್ಟು ಪ್ರತಿಭಟನೆಯ ಸಂದರ್ಭದಲ್ಲಿ ದಾಖಲಾದ ಪ್ರಕರಣಗಳನ್ನು ರಾಜ್ಯ ಸರ್ಕಾರ ಹಿಂತೆಗೆದುಕೊಳ್ಳುವುದಾಗಿ ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸಾಮಿ ತಿಳಿಸಿದ್ದಾರೆ.

ಕಾನೂನು ತಜ್ಞರಿಂದ ಸಲಹೆಗಳನ್ನು ಪಡೆದ ನಂತರ, ಜಲ್ಲಿಕಟ್ಟು ಪ್ರತಿಭಟನೆಯ ಸಂದರ್ಭದಲ್ಲಿ ದಾಖಲಾದ ಪ್ರಕರಣಗಳನ್ನು ರಾಜ್ಯ ಸರ್ಕಾರ ಹಿಂತೆಗೆದುಕೊಳ್ಳಲಿದೆ ಎಂದು ಸಿಎಂ ಎಡಪ್ಪಾಡಿ ಪಳನಿಸಾಮಿ ಹೇಳಿದ್ದಾರೆ. ಆದರೆ, ಪ್ರತಿಭಟನೆಯ ಸಂದರ್ಭದಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿದ ಮತ್ತು ಸಾರ್ವಜನಿಕ ಆಸ್ತಿಗೆ ಹಾನಿಯಾದ ಪ್ರಕರಣಗಳನ್ನು ಹಿಂಪಡೆಯಲು ಸಾಧ್ಯವಿಲ್ಲ ಎಂದಿದ್ದಾರೆ.

ಜಲ್ಲಿಕಟ್ಟು ಪ್ರತಿಭಟನೆಯ ಸಮಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ನಾವು ಹಲವಾರು ಪ್ರಕರಣಗಳನ್ನು ದಾಖಲಿಸಿದ್ದೇವೆ. ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ತಡೆಗಟ್ಟುವ ಕಾಯ್ದೆಯಡಿ ದಾಖಲಾದ ಪ್ರಕರಣಗಳನ್ನು ಹೊರತುಪಡಿಸಿ, ಇತರ ಪ್ರಕರಣಗಳನ್ನು ಹಿಂಪಡೆಯಲು ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

ಓದಿ: ಕರಣ್ ಜೋಹರ್, ಹಾರ್ದಿಕ್, ರಾಹುಲ್ ವಿರುದ್ಧ ಕೇಸ್​: ವಿಚಾರಣೆ ಮುಂದೂಡಿಕೆ

ನಗರದಾದ್ಯಂತ ಹಿಂಸಾಚಾರ ಭುಗಿಲೆದ್ದ ಕಾರಣ ಕೆಲವು ಪ್ರಕರಣಗಳು ಅನಿವಾರ್ಯವಾಗಿ ದಾಖಲಾಗಿವೆ ಎಂದು ಪಳನಿಸಾಮಿ ಶಾಸಕಾಂಗ ಸಭೆಯಲ್ಲಿ ಹೇಳಿದ್ದಾರೆ. ಪ್ರತಿಭಟನೆಯ ಸಮಯದಲ್ಲಿ ಕೆಲವು ದುಷ್ಕರ್ಮಿಗಳು ವಾಹನಗಳಿಗೆ ಬೆಂಕಿ ಹಚ್ಚಿದ್ದರು.

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.