ETV Bharat / bharat

ಕೊರೊನಾ ಕರ್ತವ್ಯದ ವೇಳೆ ಮರಣಹೊಂದಿದರೆ 50 ಲಕ್ಷ ರೂ. ಪರಿಹಾರ: ತಮಿಳುನಾಡು ಸಿಎಂ

ಕೊರೊನಾ ವಿರುದ್ಧ ಹೋರಾಡುತ್ತಿರುವವರು ಕರ್ತವ್ಯದ ವೇಳೆ ಮರಣ ಹೊಂದಿದರೆ, ಅಂತವರ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ನೀಡುವುದಾಗಿ ತಮಿಳುನಾಡು ಸಿಎಂ ಕೆ. ಪಳನಿಸ್ವಾಮಿ ಹೇಳಿದ್ದಾರೆ.

ಸಿಎಂ ಕೆ. ಪಳನಿಸ್ವಾಮಿ
ಸಿಎಂ ಕೆ. ಪಳನಿಸ್ವಾಮಿ
author img

By

Published : Apr 22, 2020, 9:31 PM IST

ಚೆನ್ನೈ: ಕೊರೊನಾ ವೈರಸ್​ ವಿರುದ್ಧ ಹೋರಾಡುತ್ತಿರುವ ಪೊಲೀಸರು​​, ನೈರ್ಮಲ್ಯ ಕಾರ್ಮಿಕರು, ಕಂದಾಯ ಇಲಾಖೆಯ ಅಧಿಕಾರಿಗಳು ಮತ್ತು ಸರ್ಕಾರಿ ಆರೋಗ್ಯ ಅಧಿಕಾರಿಗಳು ಒಂದು ವೇಳೆ, ಕೊರೊನಾದಿಂದ ಮರಣ ಹೊಂದಿದ್ರೆ, ಕುಟುಂಬಳಿಗೆ 50 ಲಕ್ಷ ರೂ. ನೀಡುವುದಾಗಿ ತಮಿಳುನಾಡು ಮುಖ್ಯಮಂತ್ರಿ ಕೆ. ಪಳನಿಸ್ವಾಮಿ ಬುಧವಾರ ಹೇಳಿದ್ದಾರೆ.

ಈ ಹಿಂದೆ 10 ಲಕ್ಷ ರೂ. ನೀಡುವುದಾಗಿ ಸಿಎಂ ಘೋಷಿಸಿದ್ದರು. ಈಗ 50 ಲಕ್ಷಕ್ಕೆ ಹೆಚ್ಚಿಸಿದ್ದಾರೆ. ಅಲ್ಲದೇ ಮೃತ ವ್ಯಕ್ತಿಯ ಕುಟುಂಬ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡಲಾಗುವುದು ಎಂದು ಪಳನಿಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಸ್ವಾರ್ಥ ಸೇವೆ ಸಲ್ಲಿಸಿದ ಮೃತ ವ್ಯಕ್ತಿಯ ಶವವನ್ನು ಗೌರವದೊಂದಿಗೆ ಅಂತ್ಯಸಂಸ್ಕಾರ ಮಾಡಲಾಗುವುದು. ಅದಕ್ಕಾಗಿ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳುತ್ತದೆ ಎಂದು ಪಳನಿಸ್ವಾಮಿ ಹೇಳಿದ್ದಾರೆ.

ಒಬ್ಬ ವ್ಯಕ್ತಿಯು ಇತರ ಸರ್ಕಾರಿ ಇಲಾಖೆ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿದ್ದರೆ, ರಾಜ್ಯ ಸರ್ಕಾರವು ಅಂತಹ ವ್ಯಕ್ತಿಗೆ ಪ್ರಶಸ್ತಿ ನೀಡುತ್ತದೆ ಮತ್ತು ಅವರ ಸೇವೆಗಳನ್ನು ಪ್ರಶಂಸಿಸಲಾಗುತ್ತದೆ ಎಂದಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.