ಹೈದರಾಬಾದ್: 1992ರ ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಲಖನೌ ಸಿಬಿಐ ವಿಶೇಷ ನ್ಯಾಯಾಲಯ ಅಂತಿಮ ತೀರ್ಪು ಹೊರಡಿಸಿದ್ದು, ಎಲ್ಲ ಆರೋಪಿಗಳನ್ನ ಖುಲಾಸೆಗೊಳಿಸಿದೆ. ಇದಕ್ಕೆ ಎಐಎಂಐಎಂ ಪಕ್ಷದ ಮುಖ್ಯಸ್ಥ ಹಾಗೂ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಭಾರತೀಯ ನ್ಯಾಯಾಂಗ ವ್ಯವಸ್ಥೆಯಲ್ಲಿ ಇಂದು ಕರಾಳ ದಿನ. ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಯಾವುದೇ ಪಿತೂರಿ ನಡೆದಿಲ್ಲ ಎಂದು ನ್ಯಾಯಾಲಯ ಹೇಳಿದೆ. ದಯವಿಟ್ಟು ನನಗೆ ಜ್ಞಾನೋದಯ ಮಾಡಿ. ಒಂದು ಪ್ರಕರಣ ಸ್ವಯಂಪ್ರೇರಿತವಾಗಿ ಅನರ್ಹಗೊಳಿಸಲು ಎಷ್ಟು ದಿನಗಳ ಸಿದ್ಧತೆ ಬೇಕಾಗುತ್ತದೆ ಎಂದಿದ್ದಾರೆ.
ಸಿಬಿಐ ನ್ಯಾಯಾಲಯದ ತೀರ್ಪು ಭಾರತೀಯ ನ್ಯಾಯಾಂಗ ವ್ಯವಸ್ಥೆಯಲ್ಲಿ ಒಂದು ಕಪ್ಪು ದಿನ. ಈಗಾಗಲೇ ಬಾಬ್ರಿ ಭೂಮಿ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಕಾನೂನು ನಿಯಮದ ಉಲ್ಲಂಘನೆ ಮಾಡಿದೆ. ಇಲ್ಲಿಯವರೆಗೆ ಈ ಪ್ರಕರಣದಲ್ಲಿ ಮುಸ್ಲಿಂ ಸಮುದಾಯಕ್ಕೆ ದೊಡ್ಡ ಮಟ್ಟದ ಅನ್ಯಾಯವಾಗಿದೆ ಎಂದಿದ್ದಾರೆ. ಬಾಬ್ರಿ ಮಸೀದಿ ಧ್ವಂಸ ಮಾಡುವುದನ್ನ ಇಡೀ ದೇಶವೇ ನೋಡಿದೆ. ಆದರೂ ಇದಕ್ಕೆ ಯಾವುದೇ ರೀತಿಯ ಪಿತೂರಿ ನಡೆದಿಲ್ಲ ಎಂದು ವಿಶೇಕ್ಷ ಕೋರ್ಟ್ ಹೇಳ್ತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.