ETV Bharat / bharat

ಬಾರಾಮುಲ್ಲಾದಲ್ಲಿ ಲಷ್ಕರ್ ಕಮಾಂಡರ್ ಸೇರಿ ಮೂವರು​​ ಉಗ್ರರು ಬಲಿ - six killed in Kashmir

ಉತ್ತರ ಕಾಶ್ಮೀರದ ಬಾರಾಮುಲ್ಲಾದ ಕ್ರೇರಿ ಗ್ರಾಮದಲ್ಲಿ ಸೋಮವಾರ ಬೆಳಗ್ಗೆ ಸಿಆರ್‌ಪಿಎಫ್ ಯೋಧರು ಮತ್ತು ಪೊಲೀಸರ ನಾಕಾ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮಹಾನಿರ್ದೇಶಕ ದಿಲ್ಬಾಗ್ ಸಿಂಗ್ ತಿಳಿಸಿದ್ದಾರೆ.

ಬಾರಾಮುಲ್ಲಾದಲ್ಲಿ ಮೂವರು ಎಲ್‌ಇಟಿ ಉಗ್ರರು ಬಲಿ

author img

By

Published : Aug 17, 2020, 10:31 PM IST

ಶ್ರೀನಗರ : ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಸೋಮವಾರ ನಡೆದ ಉಗ್ರರು ಮತ್ತು ಸೇನೆಯ ನಡುವಿನ ಗುಂಡಿನ ಕಾಳಗದಲ್ಲಿ ಲಷ್ಕರ್​ ಎ ತಯ್ಬಾ ಉಗ್ರ ಸಂಘಟನೆಯ ಕಮಾಂಡರ್ ಸೇರಿದಂತೆ ಮೂವರು ಉಗ್ರರನ್ನು ಭಾರತೀಯ ಯೋಧರು ಹೊಡೆದುರುಳಿಸಿದ್ದಾರೆ. ಇದಕ್ಕೂ ಮೊದಲು ಕೇವಲ ಒಂದು ಗಂಟೆ ಮೊದಲು ನಡೆದ ದಾಳಿಯಲ್ಲಿ ಮೂವರು ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ.

ಉಗ್ರರ ವಿರುದ್ಧದ ಕಾರ್ಯಾಚರಣೆ ಮುಂದುವರೆದಿದ್ದು, ಇನ್ನೂ ಇಬ್ಬರು ಸೇನಾಧಿಕಾರಿಗಳು ಗಾಯಗೊಂಡಿದ್ದಾರೆ. ಅದರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸ್ ವಕ್ತಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉತ್ತರ ಕಾಶ್ಮೀರದ ಬಾರಾಮುಲ್ಲಾದ ಕ್ರೇರಿ ಗ್ರಾಮದಲ್ಲಿ ಸೋಮವಾರ ಬೆಳಗ್ಗೆ ಸಿಆರ್‌ಪಿಎಫ್ ಯೋಧರು ಮತ್ತು ಪೊಲೀಸರ ನಾಕಾ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮಹಾನಿರ್ದೇಶಕ ದಿಲ್ಬಾಗ್ ಸಿಂಗ್ ತಿಳಿಸಿದ್ದಾರೆ.

ಹತ್ಯೆಗೀಡಾದವರನ್ನು ಲೋಕಾಸ್ ಶರ್ಮಾ ಮತ್ತು ಸಿಆರ್‌ಪಿಎಫ್‌ನ 119 ಬೆಟಾಲಿಯನ್‌ನ ಚಾಲಕ ಖುರ್ಷೀದ್ ಖಾನ್ ಮತ್ತು ಜೆ & ಕೆ ಪೊಲೀಸ್​ ಎಸ್‌ಪಿಒ ಪಟ್ಟಾನ್ ನಿವಾಸಿಯಾದ ಮುಜಾಫರ್ ಅಹ್ಮದ್ ಎಂದು ಗುರುತಿಸಲಾಗಿದೆ.

ಭದ್ರತಾ ಪಡೆಗಳು ನಾಕಾದ ಮೇಲೆ ದಾಳಿ ನಡೆಸಿದ್ದ ಉಗ್ರರನ್ನು ಸುತ್ತುವರಿಯುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಡಿಜಿಪಿ ಹೇಳಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.