ETV Bharat / bharat

ಬಿಜೆಪಿ ಕಾರ್ಯಕರ್ತರ ಹತ್ಯೆ ಖಂಡಿಸಿದ ಮೋದಿ: ಕೇಂದ್ರದ ವಿರುದ್ಧ ಮುಫ್ತಿ ಗರಂ - ಭಯೋತ್ಪಾದನಾ ದಾಳಿ ಬಗ್ಗೆ ಮುಫ್ತಿ ಪ್ರತಿಕ್ರಿಯೆ

ಜಮ್ಮು ಕಾಶ್ಮೀರದಲ್ಲಿ ಉಗ್ರರ ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಹಾಗೂ ಕಾಶ್ಮೀರದ ರಾಜಕೀಯ ನಾಯಕರು ಸಂತಾಪ ಸೂಚಿಸಿದ್ದಾರೆ.

top political leaders reaction on Terrorist Attack
ಭಯೋತ್ಪಾದಕರ ದಾಳಿ ಬಗ್ಗೆ ರಾಜಕೀಯ ನಾಯಕರ ಪ್ರತಿಕ್ರಿಯೆ
author img

By

Published : Oct 30, 2020, 10:28 AM IST

ಶ್ರೀನಗರ (ಜಮ್ಮು ಕಾಶ್ಮೀರ): ಕಣಿವೆ ನಾಡಲ್ಲಿ ಮೂವರು ಬಿಜೆಪಿ ಕಾರ್ಯಕರ್ತರ ಹತ್ಯೆಗೆ ಸಂಬಂಧಿಸಿದಂತೆ ದೇಶಾದ್ಯಂತ ಖಂಡನೆ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಸೇರಿದಂತೆ ಜಮ್ಮು ಕಾಶ್ಮೀರದ ಹಲವು ರಾಜಕೀಯ ನಾಯಕರು ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • I condemn the killing of 3 of our young Karyakartas. They were bright youngsters doing excellent work in J&K. My thoughts are with their families in this time of grief. May their souls rest in peace. https://t.co/uSfsUP3n3W

    — Narendra Modi (@narendramodi) October 29, 2020 " class="align-text-top noRightClick twitterSection" data=" ">

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ ನಮ್ಮ ಪಕ್ಷದ ಮೂವರು ಯುವ ಕಾರ್ಯಕರ್ತರ ಹತ್ಯೆಯನ್ನು ನಾನು ಖಂಡಿಸುತ್ತೇನೆ. ಅವರು ಜಮ್ಮು ಕಾಶ್ಮೀರದಲ್ಲಿ ಅತ್ಯುತ್ತಮ ಕೆಲಸ ಮಾಡುತ್ತಿದ್ದರು. ಈ ದುಃಖದ ಸಮಯದಲ್ಲಿ ಅವರ ಕುಟುಂಬದೊಂದಿಗೆ ನಾವಿದ್ದೇವೆ ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.

  • Terrible news from Kulgam district of South Kashmir. I unequivocally condemn the targeted killing of the 3 BJP workers in a terror attack. May Allah grant them place in Jannat & may their families find strength during this difficult time.

    — Omar Abdullah (@OmarAbdullah) October 29, 2020 " class="align-text-top noRightClick twitterSection" data=" ">

ದಕ್ಷಿಣ ಕಾಶ್ಮೀರದ ಕುಲ್ಗಾಂನಿಂದ ಭೀಕರ ಸುದ್ದಿಯೊಂದು ಬಂದಿದ್ದು, ಮೂವರು ಬಿಜೆಪಿ ಕಾರ್ಯಕರ್ತರನ್ನು ಉಗ್ರರು ಹತ್ಯೆ ಮಾಡಿರುವ ವಿಚಾರ ಖಂಡನೀಯವಾಗಿದೆ. ದೇವರು ಅವರು ಕುಟುಂಬಕ್ಕೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ನ್ಯಾಷನಲ್ ಕಾನ್ಫರೆನ್ಸ್ ನಾಯಕ ಓಮರ್ ಅಬ್ದುಲ್ಲಾ ಟ್ವೀಟ್ ಮಾಡಿದ್ದಾರೆ.

  • Saddened to hear about the killing of three BJP workers in Kulgam. Condolences to their families. At the end of the day, its people of J&K who pay with their lives because of GOI’s ill thought out policies.

    — Mehbooba Mufti (@MehboobaMufti) October 29, 2020 " class="align-text-top noRightClick twitterSection" data=" ">

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಕೂಡಾ ಈ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ್ದು, ಕುಲ್ಗಾಂನಲ್ಲಿ ಮೂವರು ಬಿಜೆಪಿ ಕಾರ್ಯಕರ್ತರ ಹತ್ಯೆಯ ಬಗ್ಗೆ ಕೇಳಿ ಬೇಸರವಾಯಿತು ಎಂದಿರುವ ಜೊತೆಗೆ ಕೇಂದ್ರ ಸರ್ಕಾರದ ಕೆಟ್ಟ ನೀತಿಗಳಿಂದಾಗಿ ಇಲ್ಲಿನ ಜನರು ತಮ್ಮ ಜೀವವನ್ನು ಮುಡಿಪಾಗಿಡುತ್ತಿದ್ದಾರೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಕಾಶ್ಮೀರದಲ್ಲಿ ಉಗ್ರರ ಗುಂಡಿಗೆ ಮೂವರು ಬಿಜೆಪಿ ಕಾರ್ಯಕರ್ತರು ಬಲಿ!

ಜಮ್ಮು ಕಾಶ್ಮೀರದ ಬಿಜೆಪಿ ಮುಖ್ಯಸ್ಥ ರವೀಂದರ್ ರೈನಾ ಭಯೋತ್ಪಾದಕರ ದಾಳಿಗೆ ಆಕ್ರೋಶ ವ್ಯಕ್ತಪಡಿಸಿದ್ದು, ಆ ಮೂವರು ಕಾರ್ಯಕರ್ತರು ಧೈರ್ಯವಂತರಾಗಿದ್ದು, ಭಾರತ ಮಾತೆಗಾಗಿ ಹುತಾತ್ಮರಾಗಿದ್ದಾರೆ. ಅವರ ತ್ಯಾಗ ನಷ್ಟವಾಗಲು ಬಿಡುವುದಿಲ್ಲ. ಹೇಡಿ ಪಾಕಿಸ್ತಾನ ಅದರ ಪಾಪಗಳಿಗೆ ಹೆಚ್ಚಿನದನ್ನು ಭರಿಸಬೇಕು ಎಂದು ಕಿಡಿಕಾರಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.