ನವದೆಹಲಿ: ಭಾರತದಲ್ಲಿ ಕೇವಲ ಮೂರೇ ಮೂರು ದಿನಗಳಲ್ಲಿ ಸುಮಾರು ಎರಡು ಲಕ್ಷ ಕೋವಿಡ್ ಸೋಂಕಿತರು ಪತ್ತೆಯಾಗುತ್ತಿದ್ದಾರೆ. ಇದೀಗ ಸಾವಿನ ಸಂಖ್ಯೆ 50 ಸಾವಿರದ ಗಡಿಯತ್ತ ಸಾಗಿದೆ.
ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 63,489 ಸೋಂಕಿತರು ಪತ್ತೆಯಾಗಿದ್ದು, 944 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 25,89,682ಕ್ಕೆ ಹಾಗೂ ಮೃತರ ಸಂಖ್ಯೆ 49,980ಕ್ಕೆ ಏರಿಕೆಯಾಗಿದೆ.
ಒಟ್ಟು ಸೋಂಕಿತರ ಪೈಕಿ 18,62,258 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಉಳಿದಂತೆ 6,77,444 ಕೇಸ್ಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಆಗಸ್ಟ್ 15ರವರೆಗೆ 2,93,09,703 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ನಿನ್ನೆ ಒಂದೇ ದಿನ 7,46,608 ಸ್ಯಾಂಪಲ್ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ತಿಳಿಸಿದೆ.