ನವದೆಹಲಿ: ದೇಶದಲ್ಲಿ ಕೊರೊನಾದಿಂದ ಗುಣಮುಖರಾದವರಲ್ಲಿ ಶೇ.75 ರಷ್ಟು ಜನರು ಮಹಾರಾಷ್ಟ್ರ, ಕರ್ನಾಟಕ, ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ, ದೆಹಲಿ, ಆಂಧ್ರಪ್ರದೇಶ, ಅಸ್ಸೋಂ, ಉತ್ತರ ಪ್ರದೇಶ, ಮತ್ತು ಛತ್ತೀಸ್ಗಢ ಈ 10 ರಾಜ್ಯಗಳಲ್ಲಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಟ್ವೀಟ್ ಮಾಡಿದೆ.
ಈ ಹಿಂದಿನ ತಿಂಗಳುಗಳಿಗೆ ಹೋಲಿಸಿಕೊಂಡರೆ ನಿನ್ನೆ ಪತ್ತೆಯಾಗಿರುವ ಹೊಸ ಸೋಂಕಿತರ ಸಂಖ್ಯೆ ತೀರಾ ಕಡಿಮೆಯಿದೆ. ಕಳೆದ 24 ಗಂಟೆಗಳಲ್ಲಿ 50,129 ಸೋಂಕಿತರು ಪತ್ತೆಯಾಗಿದ್ದು, 578 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಪ್ರಕರಣಗಳ ಸಂಖ್ಯೆ 78,64,81 ಹಾಗೂ ಮೃತರ ಸಂಖ್ಯೆ 1,18,534ಕ್ಕೆ ಏರಿಕೆಯಾಗಿದೆ.
ಒಟ್ಟು ಸೋಂಕಿತರ ಪೈಕಿ 70,78,123 ಮಂದಿ ಗುಣಮುಖರಾಗಿದ್ದಾರೆ. ಉಳಿದಂತೆ 6,68,154 ಕೇಸ್ಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಅಕ್ಟೋಬರ್ 24ರ ವರೆಗೆ 10,25,23,469 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ನಿನ್ನೆ ಒಂದೇ ದಿನ 11,40,905 ಸ್ಯಾಂಪಲ್ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ತಿಳಿಸಿದೆ.