ನವದೆಹಲಿ: ಭಾರತದಲ್ಲಿ ಪ್ರತಿನಿತ್ಯ ಹೆಚ್ಚೆಚ್ಚು ಜನರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗುತ್ತಿದ್ದು ಪಾಸಿಟಿವ್ ಬರುತ್ತಿರುವವರ ಸಂಖ್ಯೆ ತಗ್ಗುತ್ತಿದೆ ಎಂದು ಆರೋಗ್ಯ ಇಲಾಖೆ ಟ್ವೀಟ್ ಮಾಡಿದೆ.
ಕಳೆದ 24 ಗಂಟೆಗಳಲ್ಲಿ 48,648 ಸೋಂಕಿತರು ಪತ್ತೆಯಾಗಿದ್ದು, 563 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 80,88,851 ಹಾಗೂ ಮೃತರ ಸಂಖ್ಯೆ 1,21,090ಕ್ಕೆ ಏರಿಕೆಯಾಗಿದೆ.
ಒಟ್ಟು ಸೋಂಕಿತರ ಪೈಕಿ 73,73,375 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕೆಲ ತಿಂಗಳ ಬಳಿಕ ಸಕ್ರಿಯ ಪ್ರಕರಣಗಳ ಸಂಖ್ಯೆ 6 ಲಕ್ಷ ಗಡಿಯಿಂದ ಕೆಳಗಿಳಿದಿದೆ (5,94,386) ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಅಕ್ಟೋಬರ್ 29ರ ವರೆಗೆ 10,77,28,088 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ನಿನ್ನೆ ಒಂದೇ ದಿನ 11,64,648 ಸ್ಯಾಂಪಲ್ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ತಿಳಿಸಿದೆ.