ನವದೆಹಲಿ: ದೇಶದಲ್ಲಿ 90,16,289 ಮಂದಿ ಮಹಾಮಾರಿ ಕೊರೊನಾದಿಂದ ಗುಣಮುಖರಾಗಿದ್ದು, ಚೇತರಿಕೆಯ ಪ್ರಮಾಣ ಶೇ.94.20ಕ್ಕೆ ಏರಿಕೆಯಾಗಿದೆ. ಮರಣ ಪ್ರಮಾಣ ಶೇ.1.45ಕ್ಕೆ ಇಳಿಕೆಯಾಗಿದ್ದು, ಜನರಲ್ಲಿ ಆತ್ಮವಿಶ್ವಾಸ ಹೆಚ್ಚುತ್ತಿದೆ.

ಕಳೆದ 24 ಗಂಟೆಗಳಲ್ಲಿ 36,594 ಸೋಂಕಿತರು ಪತ್ತೆಯಾಗಿದ್ದು, 540 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 95,71,559 ಹಾಗೂ ಮೃತರ ಸಂಖ್ಯೆ 1,39,188ಕ್ಕೆ ಏರಿಕೆಯಾಗಿದೆ. ಆದರೆ ಶೇ.4.35 ರಷ್ಟು (4,16,082) ಕೇಸ್ಗಳು ಮಾತ್ರ ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಡಿಸೆಂಬರ್ 3ರ ವರೆಗೆ 14,47,27,749 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ನಿನ್ನೆ ಒಂದೇ ದಿನ 11,70,102 ಸ್ಯಾಂಪಲ್ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ತಿಳಿಸಿದೆ.