ETV Bharat / bharat

ದೇಶದಲ್ಲಿ 1.43 ಲಕ್ಷ ಕೊರೊನಾ ಕೇಸ್​ಗಳು ಆ್ಯಕ್ಟಿವ್​​.. 62 ಲಕ್ಷ ಮಂದಿಗೆ ವ್ಯಾಕ್ಸಿನ್​

author img

By

Published : Feb 9, 2021, 10:53 AM IST

ಈವರೆಗೆ ಆರೋಗ್ಯ ಕಾರ್ಯಕರ್ತರು ಹಾಗೂ ಕೋವಿಡ್​ ವಿರುದ್ಧದ ಹೋರಾಟದಲ್ಲಿರುವ ಮುಂಚೂಣಿ ಕಾರ್ಮಿಕರು ಸೇರಿ 62,59,008 ಮಂದಿಗೆ ಲಸಿಕೆ ನೀಡಲಾಗಿದೆ. ಅತಿ ಕಡಿಮೆ ದಿನಗಳಲ್ಲಿ ಆರು ಮಿಲಿಯನ್​ ವ್ಯಾಕ್ಸಿನ್​ ಡೋಸ್​ಗಳನ್ನು ನೀಡಿದ ಕೀರ್ತಿ ಭಾರತದ್ದಾಗಿದೆ.

Total number of corona cases and deaths in India
ಕೊರೊನಾ ಲಸಿಕೆ

ನವದೆಹಲಿ: ಕಳೆದ 24 ಗಂಟೆಗಳಲ್ಲಿ 9,110 ಕೋವಿಡ್​ ಸೋಂಕಿತರು ಪತ್ತೆಯಾಗಿದ್ದು, 78 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ದೇಶಾದ್ಯಂತ ಪ್ರಕರಣಗಳ ಸಂಖ್ಯೆ 1,08,47,304 ಹಾಗೂ ಸಾವಿನ ಸಂಖ್ಯೆ 1,55,158 ಕ್ಕೆ ಏರಿಕೆಯಾಗಿದೆ.

ಒಟ್ಟು ಸೋಂಕಿತರ ಪೈಕಿ 1,05,48,521 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಜ್​​ ಆಗಿದ್ದಾರೆ. ಉಳಿದಂತೆ 1,43,625 ಕೇಸ್​​ಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Total number of corona cases and deaths in India
ಕೋವಿಡ್​ ಟೆಸ್ಟಿಂಗ್​ ಅಪ್​ಡೇಟ್ಸ್​​

ಜವವರಿ 26ರಿಂದ ಈವರೆಗೆ ಆರೋಗ್ಯ ಕಾರ್ಯಕರ್ತರು ಹಾಗೂ ಕೋವಿಡ್​ ವಿರುದ್ಧದ ಹೋರಾಟದಲ್ಲಿರುವ ಮುಂಚೂಣಿ ಕಾರ್ಮಿಕರು ಸೇರಿ 62,59,008 ಮಂದಿಗೆ ಲಸಿಕೆ ನೀಡಲಾಗಿದೆ. ಅತಿ ಕಡಿಮೆ ದಿನಗಳಲ್ಲಿ ಆರು ಮಿಲಿಯನ್​ ವ್ಯಾಕ್ಸಿನ್​ ಡೋಸ್​ಗಳನ್ನು ನೀಡಿದ ಕೀರ್ತಿ ಭಾರತದ್ದಾಗಿದೆ.

ಫೆಬ್ರವರಿ​ 8ರ ವರೆಗೆ 20,25,87,752 ಜನರಿಗೆ ಕೋವಿಡ್​ ಟೆಸ್ಟ್​ ಮಾಡಲಾಗಿದ್ದು, ನಿನ್ನೆ ಒಂದೇ ದಿನ 6,87,138 ಸ್ಯಾಂಪಲ್​ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ತಿಳಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.