ನವದೆಹಲಿ: ಭಾರತದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕೋವಿಡ್ ಟೆಸ್ಟ್ ಮಾಡಲಾಗುತ್ತಿದ್ದರೂ ಕೆಲ ದಿನಗಳಿಂದ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಕಂಡುಬರುತ್ತಿದೆ. ಇತ್ತ ಚೇತರಿಕೆ ಪ್ರಮಾಣ ಕೂಡ ಹೆಚ್ಚುತ್ತಿದೆ.
ಕಳೆದ 24 ಗಂಟೆಗಳಲ್ಲಿ 75,829 ಸೋಂಕಿತರು ಪತ್ತೆಯಾಗಿದ್ದು, 940 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 65,49,374 ಹಾಗೂ ಮೃತರ ಸಂಖ್ಯೆ 1,01,782ಕ್ಕೆ ಏರಿಕೆಯಾಗಿದೆ.
ಒಟ್ಟು ಸೋಂಕಿತರ ಪೈಕಿ 55,09,967 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಉಳಿದಂತೆ 9,37,625 ಕೇಸ್ಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಅಕ್ಟೋಬರ್ 3ರ ವರೆಗೆ 7,89,92,534 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ನಿನ್ನೆ ಒಂದೇ ದಿನ 11,42,131 ಸ್ಯಾಂಪಲ್ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ತಿಳಿಸಿದೆ.