ನವದೆಹಲಿ: ಭಾರತದಲ್ಲಿ ಶೇ. 85ಕ್ಕೂ ಅಧಿಕ ಕೋವಿಡ್ ಸೋಂಕಿತರು ಮಹಾಮಾರಿಯಿಂದ ಚೇತರಿಸಿಕೊಂಡಿದ್ದು, 8.8 ಲಕ್ಷ ಕೇಸ್ಗಳು ಮಾತ್ರ ಸಕ್ರಿಯವಾಗಿವೆ.
ಕಳೆದ 24 ಗಂಟೆಗಳಲ್ಲಿ 73,272 ಸೋಂಕಿತರು ಪತ್ತೆಯಾಗಿದ್ದು, 926 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 69,79,424 ಹಾಗೂ ಮೃತರ ಸಂಖ್ಯೆ 1,07,416ಕ್ಕೆ ಏರಿಕೆಯಾಗಿದೆ.
ಒಟ್ಟು ಸೋಂಕಿತರ ಪೈಕಿ 59,88,823 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಉಳಿದಂತೆ 8,83,185 ಕೇಸ್ಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಅಕ್ಟೋಬರ್ 9ರವರೆಗೆ 8,57,98,698 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ನಿನ್ನೆ ಒಂದೇ ದಿನ 11,64,018 ಸ್ಯಾಂಪಲ್ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ತಿಳಿಸಿದೆ.