ಕಣ್ಣೂರು (ಕೇರಳ): ಕೇರಳದಲ್ಲಿ ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಂಗಳಮುಖಿಯೊಬ್ಬರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಇದನ್ನೂ ಓದಿ...ಶಶಿಕಲಾ ಆಗಮನದಿಂದ ಹಿಂದಕ್ಕೆ ಸರಿಯಿತಾ ಎಐಎಡಿಎಂಕೆ ಪುರುಷ ಪ್ರಧಾನರ ಆಡಳಿತ!?
ಕಣ್ಣೂರಿನ ಸಮಾಜವಾದಿ ಕಾಲೋನಿಯ ಸ್ನೇಹಾ ಆತ್ಮಹತ್ಯೆ ಮಾಡಿಕೊಂಡ ಮಂಗಳಮುಖಿ ಎಂದು ತಿಳಿದು ಬಂದಿದೆ. ಸುದ್ದಿ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಪರಿಯಾರಂ ವೈದ್ಯಕೀಯ ಕಾಲೇಜಿನ ಶವಾಗಾರದಲ್ಲಿ ಮೃತದೇಹ ಇಡಲಾಗಿದೆ. ಆದರೆ, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.