ETV Bharat / bharat

ಕೋವಿಡ್​ ಸಮಯದಲ್ಲಿ ವಿಮಾನ ಪ್ರಯಾಣ ಅತ್ಯಂತ ಸುರಕ್ಷಿತ: ಏಮ್ಸ್‌ ನಿರ್ದೇಶಕ ಗುಲೇರಿಯಾ

author img

By

Published : Jun 16, 2020, 7:42 PM IST

ಕೊರೊನಾ ವೈರಸ್‌ ಹರಡುತ್ತಿರುವ ಇಂತಹ ಸಂದರ್ಭದಲ್ಲಿ ಇತರೆ ಮಾರ್ಗಗಳಿಗೆ ಹೋಲಿಸಿದರೆ ವಿಮಾನ ಪ್ರಯಾಣ ಅತ್ಯಂತ ಸುರಕ್ಷಿತವಾಗಿದೆ ಎಂದು ದೆಹಲಿಯ ಏಮ್ಸ್‌ ನಿರ್ದೇಶಕ ರಣದೀಪ್‌ ಗುಲೇರಿಯಾ ತಿಳಿಸಿದ್ದಾರೆ.

travelling-in-flight-is-the-safest-mode-of-travel-aiims-delhi-director
ಇತರೆ ಸೇವೆಗಳಿಗಿಂತ ವಿಮಾನ ಪ್ರಯಾಣ ಅತ್ಯಂತ ಸುರಕ್ಷಿತ;ದೆಹಲಿ ಏಮ್ಸ್‌ ನಿರ್ದೇಶಕ ರಣದೀಪ್‌ ಗುಲೇರಿಯಾ

ನವದೆಹಲಿ: ಬೇರೆ ಮಾರ್ಗಗಳಿಗೆ ಹೋಲಿಸಿದರೆ ವಿಮಾನದ ಪ್ರಯಾಣ ಅತ್ಯಂತ ಸುರಕ್ಷಿತ ಎಂದು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ(AIIMS) ದೆಹಲಿಯ ನಿರ್ದೇಶಕ ಡಾ.ರಂದೀಪ್‌ ಗುಲೇರಿಯಾ ತಿಳಿಸಿದ್ದಾರೆ.

ಜಿಎಂಆರ್‌ ಸಮೂಹ ಏರ್ಪಪಡಿಸಿದ್ದ 'ರೆಪೋಸಿಂಗ್‌ ದಿ ಫೇತ್​‌ ಇನ್‌ ಫ್ಲೈಯಿಂಗ್‌' ವೆಬಿನಾರ್‌ನಲ್ಲಿ ಮಾತನಾಡಿದ ಅವರು, ವಿಮಾನದಲ್ಲಿ ಪ್ರಯಾಣಿಸುವಾಗ ರೋಗದ ಲಕ್ಷಣಗಳು ಇಲ್ಲದವರು ಕುಳಿತುಕೊಂಡರೂ ಹಾಗೂ ಇಬ್ಬರೂ ಮಾಸ್ಕ್‌ ಮತ್ತು ಫೇಸ್‌ ಶೀಲ್ಡ್‌ ಧರಿಸಿದ್ದರೆ ವೈರಸ್‌ ಹರಡುವ ಸಾಧ್ಯತೆ ಕಡಿಮೆ ಇರುತ್ತದೆ. ಹೀಗಾಗಿ ಪ್ರಯಾಣಿಕರಿಗೆ ವಿಮಾನದಲ್ಲಿನ ಪ್ರಯಾಣ ಅತ್ಯಂತ ಸುರಕ್ಷಿತವಾಗಿದೆ ಎಂದು ಹೇಳಿದ್ದಾರೆ.

ಕೊರೊನಾ ವೈರಸ್‌ ಹರಡುವಿಕೆಯ ಸಂದರ್ಭದಲ್ಲಿ ಏರ್‌ಲೈನ್ಸ್‌ಗಳು ವಿಮಾನ ನಿಲ್ದಾಣಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೊಂಡಿರುವುದನ್ನ ಶ್ಲಾಘಿಸುತ್ತೇನೆ ಎಂದಿದ್ದಾರೆ.

ಕೋವಿಡ್‌-19 ಹರಡುವ ಸಾಧ್ಯತೆ ಹಿನ್ನೆಲೆಯಲ್ಲಿ ಲಾಕ್‌ಡೌನ್‌ ವಿಧಿಸಲಾಗಿತ್ತು. ಮಾತ್ರವಲ್ಲದೆ, ಕಳೆದ ಮಾರ್ಚ್‌ನಲ್ಲಿ ವಿಮಾನ ಪ್ರಯಾಣವನ್ನು ಸರ್ಕಾರ ರದ್ದು ಮಾಡಿತ್ತು. ಲಾಕ್‌ಡೌನ್‌ ಸಡಿಲಿಸಿದ ನಂತರ ಮೇ.25ರಿಂದ ದೇಶಿಯ ವಿಮಾನಗಳ ಹಾರಾಟಕ್ಕೆ ಅವಕಾಶ ನೀಡಿಲಾಗಿತ್ತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.