ಹಿಂದಿನ ವಾರ ದೀದಿ ಜತೆ ಕಾರ್ಯಕ್ರಮದಲ್ಲಿದ್ದ ಟಿಎಂಸಿ ಶಾಸಕ ಇಂದು ಬಿಜೆಪಿಗೆ ಸೇರ್ಪಡೆ - ಪಶ್ಚಿಮ ಬಂಗಾಳದ ರಾಜಕೀಯ
ಅರಿಂದಮ್ ಭಟ್ಟಾಚಾರ್ಯ 2016ರ ವಿಧಾನಸಭಾ ಚುನಾವಣೆಯಲ್ಲಿ ಶಾಂತಿಪುರದಿಂದ ಕಾಂಗ್ರೆಸ್ ಟಿಕೆಟ್‌ನಲ್ಲಿ ಗೆದ್ದಿದ್ದರು. 2017ರಲ್ಲಿ ಅವರು ಇದ್ದಕ್ಕಿದ್ದಂತೆ ತೃಣಮೂಲ ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದರು..
ಕೋಲ್ಕತಾ (ಪಶ್ಚಿಮ ಬಂಗಾಳ) : ತೃಣಮೂಲ ಕಾಂಗ್ರೆಸ್ನಿಂದ ಬಿಜೆಪಿಗೆ ಲಗ್ಗೆ ಇಡುವವರ ಸಂಖ್ಯೆ ಹೆಚ್ಚುತ್ತಿದೆ. ಅಲ್ಲಿನ ವಿಧಾನಸಭಾ ಚುನಾವಣೆಗಳು ಸಮೀಪಿಸುತ್ತಿದ್ದಂತೆ ಟಿಎಂಪಿ ಶಾಸಕ ಅರಿಂದಮ್ ಭಟ್ಟಾಚಾರ್ಯ ಬುಧವಾರ ದೆಹಲಿಯಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ ಬಿಜೆಪಿಗೆ ಸೇರ್ಪಡೆಯಾದ ಮೊದಲ ಶಾಸಕ ಅರಿಂದಮ್ ಭಟ್ಟಾಚಾರ್ಯ ಆಗಿದ್ದು, ಶಾಂತಿಪುರದ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದಿದ್ದರು.
ಮತ್ತೊಂದು ವಿಚಾರವೆಂದರೆ ಅರಿಂದಮ್ ಭಟ್ಟಾಚಾರ್ಯ ಹಿಂದಿನ ವಾರ ಮಮತಾ ಬ್ಯಾನರ್ಜಿ ಅವರೊಂದಿಗೆ ಕಾರ್ಯಕ್ರಮವೊಂದರಲ್ಲಿ ವೇದಿಕೆ ಹಂಚಿಕೊಂಡಿದ್ದರು.
ಅರಿಂದಮ್ ಭಟ್ಟಾಚಾರ್ಯ 2016ರ ವಿಧಾನಸಭಾ ಚುನಾವಣೆಯಲ್ಲಿ ಶಾಂತಿಪುರದಿಂದ ಕಾಂಗ್ರೆಸ್ ಟಿಕೆಟ್‌ನಲ್ಲಿ ಗೆದ್ದಿದ್ದರು. 2017ರಲ್ಲಿ ಅವರು ಇದ್ದಕ್ಕಿದ್ದಂತೆ ತೃಣಮೂಲ ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದರು.
ಇದನ್ನೂ ಓದಿ: ಸಿಬಿಐ ಅಧಿಕಾರಿ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳಿಂದಲೇ ದಾಳಿ!
ಮುಂದಿನ ಚುನಾವಣೆಯಲ್ಲಿ ಅವರ ಶಾಂತಿಪುರ ವಿಧಾನಸಭಾ ಕ್ಷೇತ್ರವನ್ನ ಬೇರೆಯವರಿಗೆ ನೀಡಲು ತೃಣಮೂಲ ಕಾಂಗ್ರೆಸ್ ನಿರ್ಧರಿಸಿದ್ದ ಹಿನ್ನೆಲೆಯಲ್ಲಿ ಅವರು ಬಿಜೆಪಿ ಸೇರಲು ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ.
2011ರಲ್ಲಿ ತೃಣಮೂಲ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಈಗ ಕಷ್ಟದ ಸ್ಥಿತಿಯನ್ನು ಎದುರಿಸುತ್ತಿದೆ. ಕೆಲವು ತಿಂಗಳುಗಳಿಂದ 40ಕ್ಕೂ ಹೆಚ್ಚು ಶಾಸಕರನ್ನು ಟಿಎಂಸಿ ಕಳೆದುಕೊಂಡಿದೆ.