ETV Bharat / bharat

ಪೊಲೀಸ್​​​​​​ ಠಾಣೆಯ ಶೌಚಾಲಯದಲ್ಲಿ ನೇಣು ಬಿಗಿದುಕೊಂಡು ವ್ಯಕ್ತಿ ಸಾವು - custody death

ಮೊಬೈಲ್​ ಫೋನ್​ ಕದ್ದ ಆರೋಪದ ಮೇಲೆ ತಿರುವನಂತಪುರಂ ಕೋಟೆ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದ ವ್ಯಕ್ತಿ ಠಾಣೆಯ ಶೌಚಾಲಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.

Trivandrum fort station custody death
ತಿರುವನಂತಪುರ ಕೋಟೆ ಠಾಣೆಯ ಶೌಚಾಲಯದಲ್ಲಿ ನೇಣು ಬಿಗಿದುಕೊಂಡು ವ್ಯಕ್ತಿ ಸಾವು
author img

By

Published : Aug 17, 2020, 11:43 AM IST

ತಿರುವನಂತಪುರಂ(ಕೇರಳ): ತಿರುವನಂತಪುರಂ ಕೋಟೆ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದ ವ್ಯಕ್ತಿ ಮೃತಪಟ್ಟಿದ್ದಾನೆ. ಮೊಬೈಲ್ ಫೋನ್ ಕದ್ದು ಬಂಧನಕ್ಕೊಳಗಾಗಿದ್ದ ಅನ್ಸಾರಿ (38), ಠಾಣೆಯ ಶೌಚಾಲಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೊಬೈಲ್​ ಫೋನ್​ ಕದ್ದ ಆರೋಪದ ಮೇಲೆ ಭಾನುವಾರ ಸಂಜೆ 5 ಗಂಟೆ ಸುಮಾರಿಗೆ ಸ್ಥಳೀಯರು ಆತನನ್ನು ಬಂಧಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ನಂತರ ಪೊಲೀಸರ ಕಸ್ಟಡಿಯಲ್ಲಿದ್ದ ಆರೋಪಿ ಅನ್ಸಾರಿ ಶೌಚಾಲಯದಲ್ಲಿ ನೇಣು ಹಾಕಿಕೊಂಡಿರುವುದು ಕಂಡು ಬಂದಿದೆ. ಭಾನುವಾರ ರಾತ್ರಿ 7.30ರ ಸುಮಾರಿಗೆ ಈ ಘಟನೆ ನಡೆದಿದೆ.

ಕುಣಿಕೆ ತೆಗೆದು ಆತನನ್ನು ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ನಂತರ ಆತ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಜಿಲ್ಲಾ ಅಪರಾಧ ವಿಭಾಗ ಪ್ರಕರಣದ ತನಿಖೆ ನಡೆಸಲಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.