ಅಮರಾವತಿ(ಮಹಾರಾಷ್ಟ್ರ): ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಜಿಲ್ಲೆಯ ಘಿಕೇಡ್ ಗ್ರಾಮದ ನಾಗ್ಪುರ- ಔರಂಗಾಬಾದ್ ಹೆದ್ದಾರಿಯಲ್ಲಿ ಸಂಭವಿಸಿದೆ.
ಅನಿಲ್ ಸರಂಗಧರ್, ಕಬೀರ್, ಪ್ರಜ್ಞಾ ಹಾಗೂ ಲೀಲಾಬಾಯಿ ಮೃತರು. ಜಿಲ್ಲೆಯಲ್ಲಿ ಹಾದುಹೋಗುವ ನಾಗ್ಪುರ- ಔರಂಗಾಬಾದ್ ಹೆದ್ದಾರಿಯಲ್ಲಿ ಈ ಘಟನೆ ಸಂಭವಿಸಿದ್ದು, ಅನಿಲ್ ಹಾಗೂ ಆತನ ಮಗ ಕಬೀರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅನಿಲ್ ಪತ್ನಿ ಪ್ರಜ್ಞಾ, ಹಾಗೂ ಲೀಲಾಬಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಕೊನೆಯುಸಿರೆಳೆದಿದ್ದಾರೆ.
ರಸ್ತೆಯಲ್ಲಿದ್ದ ಗುಂಡಿಯನ್ನು ತಪ್ಪಿಸಲು ಹೋಗಿ ಅಪಘಾತ ನಡೆದಿದೆ ಎಂದು ಹೇಳಲಾಗಿದ್ದು, ಅಪಘಾತದ ನಂತರ ಲಾರಿ ಚಾಲಕ ಪರಾರಿಯಾಗಿದ್ದಾನೆ.