ಗುನ್ನಾ(ಮಧ್ಯಪ್ರದೇಶ): ವಲಸೆ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಟ್ರಕ್ ಅಪಘಾತಗೊಂಡು ಎಂಟು ಮಂದಿ ಸಾವಿಗೀಡಾಗಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮೃತರು ಮಹಾರಾಷ್ಟ್ರದಿಂದ ಉತ್ತರ ಪ್ರದೇಶಕ್ಕೆ ಪ್ರಯಾಣಿಸುತ್ತಿದ್ದರು.
ವಲಸೆ ಕಾರ್ಮಿಕರ ಮೇಲೆ ಹರಿದ ಸರ್ಕಾರಿ ಬಸ್... ಆರು ಮಂದಿ ದುರ್ಮರಣ!
ಅಪಘಾತದಲ್ಲಿ 50 ಮಂದಿ ಗಾಯಗೊಂಡಿದ್ದಾರೆ. ಮಹಾರಾಷ್ಟ್ರದಲ್ಲಿ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಇವರು, ಲಾಕ್ಡೌನ್ನಿಂದಾಗಿ ಕೆಲಸ ಸಿಗದೆ ಕಂಗಾಲಾಗಿದ್ದರು. ಹೀಗಾಗಿ ಟ್ರಕ್ವೊಂದರಲ್ಲಿ ತಮ್ಮ ತವರಿಗೆ ಪ್ರಯಾಣ ಬೆಳೆಸಿದ್ದರು. ಟ್ರಕ್ ಮಧ್ಯಪ್ರದೇಶದ ಗುನ್ನಾ ಪ್ರದೇಶದ ಬಳಿ ಏಕಾಏಕಿ ಅಪಘಾತಕ್ಕೀಡಾಗಿದ್ದರಿಂದ ಇವರು ಸಾವನ್ನಪ್ಪಿದ್ದಾರೆ ಎಂದು ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಗಾಯಗೊಂಡವರನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಇನ್ನು ಇಂದು ಬೆಳಗ್ಗೆ ಬಿಹಾರದಿಂದ ಪಂಜಾಬ್ಗೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ವಲಸೆ ಕಾರ್ಮಿಕರ ಮೇಲೆ ಬಸ್ ಹರಿದ ಪರಿಣಾಮ ಆರು ಮಂದಿ ಸಾವಿಗೀಡಾಗಿದ್ದಾರೆ.