ಬಿಹಾರ: ನಿಯಂತ್ರಣ ತಪ್ಪಿದ ಲಾರಿಯೊಂದು ಮದುವೆ ಪೆಂಡಾಲ್ಗೆ ನುಗ್ಗಿದ ಪರಿಣಾಮ 8 ಜನರು ಜನರು ಮೃತಪಟ್ಟಿರುವ ಘಟನೆ ಬಿಹಾರದ ಲಖಿಸರಾಯ್ ಎಂಬಲ್ಲಿ ನಡೆದಿದೆ.
ವೇಗವಾಗಿ ಬಂದ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮನೆಯಲ್ಲಿ ಹಾಕಿದ್ದ ಮದುವೆ ಪೆಂಡಾಲ್ ಗೆ ನುಗ್ಗಿದೆ. ಪರಿಣಾಮ 8 ಜನರು ಸ್ಥಳದಲ್ಲೇ ಅಸುನೀಗಿದರೆ, 6 ಜನರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸ್ಥಳಕ್ಕೆ ಧಾವಿಸಿದ ಪೋಲಿಸರು ಘಟನೆಯ ಬಗ್ಗೆ ಮಾಹಿತಿ ಪಡೆದು ತನಿಖೆ ಕೈಗೊಂಡಿದ್ದಾರೆ. ಅಪಘಾತ ನಡೆಯುತ್ತಿದ್ದಂತೆ ಚಾಲಕ ಲಾರಿಯನ್ನು ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದು, ಆತನ ಬಂಧನಕ್ಕಾಗಿ ಪೋಲಿಸರು ಬಲೆ ಬೀಸಿದ್ದಾರೆ.