ಮೌ (ಉತ್ತರ ಪ್ರದೇಶ): ಸಿಲಿಂಡರ್ ಸ್ಫೋಟದಿಂದ ಎರಡು ಅಂತಸ್ತಿನ ಕಟ್ಟಡ ಕುಸಿದ ಪರಿಣಾಮ ಸತ್ತವರ ಸಂಖ್ಯೆ 12ಕ್ಕೆ ಏರಿದೆ. ಅಲ್ಲದೆ ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ.
ಉತ್ತರ ಪ್ರದೇಶದ ಮೌ ಜಿಲ್ಲೆಯ ವಾಲಿದ್ಪುರ ಎಂಬಲ್ಲಿ ದುರ್ಘಟನೆ ಸಂಭವಿಸಿದೆ. ಅಲ್ಲದೆ ಘಟನೆಯಲ್ಲಿ ಹಲವರು ಗಾಯಗೊಂಡಿದ್ದಲ್ಲದೆ, ಅನೇಕರು ಅವಶೇಷಗಳಡಿ ಸಿಲುಕಿರುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆ ಬಗ್ಗೆ ಸಂತಾಪ ವ್ಯಕ್ತಪಡಿಸಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ತಕ್ಷಣವೇ ಪರಿಹಾರ ಕಾರ್ಯ ನಡೆಸುವಂತೆ ಹಿರಿಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.