ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದ್ದು, ಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಮದ್ದುಗುಂಡು ಮತ್ತು ಹಣವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದಕ್ಷಿಣ ಕಾಶ್ಮೀರ ಜಿಲ್ಲೆಯ ಖಾಜಿಗುಂಡ್ ಪ್ರದೇಶದಲ್ಲಿ ಗುರುವಾರ ನಡೆದ ಶೋಧದ ವೇಳೆ ಭದ್ರತಾ ಪಡೆಗಳು ಒಂದು ವಾಹನದಲ್ಲಿದ್ದ ಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಮದ್ದುಗುಂಡು ಮತ್ತು ನಗದು ವಶಪಡಿಸಿಕೊಂಡಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಸಂಬಂಧ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.