ETV Bharat / bharat

ಪಾಕ್​ನ ಭಾರತೀಯ ಹೈಕಮಿಷನ್​ನಲ್ಲಿದ್ದ ಇಬ್ಬರು ಅಧಿಕಾರಿಗಳು ನಾಪತ್ತೆ - ಅಧಿಕಾರಿಗಳು ಕಾಣೆ

ಪಾಕ್​​ನ ಇಸ್ಲಾಮಾಬಾದ್​ನಲ್ಲಿರುವ ಭಾರತೀಯ ಹೈಕಮಿಷನ್​ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಧಿಕಾರಿಗಳು ನಾಪತ್ತೆಯಾಗಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

Islamabad high commission
ಭಾರತೀಯ ಹೈಕಮೀಷನ್​ ಕಚೇರಿ
author img

By

Published : Jun 15, 2020, 1:17 PM IST

ನವದೆಹಲಿ: ಪಾಕಿಸ್ತಾನದ ಇಸ್ಲಾಮಾಬಾದ್​​​ನಲ್ಲಿರುವ ಭಾರತೀಯ ಹೈಕಮಿಷನ್‌ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಅಧಿಕಾರಿಗಳು ನಾಪತ್ತೆಯಾಗಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಕೆಲವು ಗಂಟೆಗಳಿಂದ ಪತ್ತೆ ಹಚ್ಚುವ ಕಾರ್ಯ ಮುಂದುವರೆಯುತ್ತಿದೆ.

ಇತ್ತೀಚೆಗಷ್ಟೇ ಭಾರತೀಯ ಅಧಿಕಾರಿಗಳ ಮೇಲೆ ಪಾಕಿಸ್ತಾನ ಗೂಢಾಚಾರ ಏಜೆನ್ಸಿ ಐಎಸ್​ಐ ಯಾವ ರೀತಿ ಕಿರುಕುಳ ನೀಡುತ್ತದೆ ಎಂದು ಕೆಲವು ಸುದ್ದಿ ಸಂಸ್ಥೆಗಳು ವರದಿ ಮಾಡಿದ್ದವು.

ದೆಹಲಿಯಲ್ಲಿ ಬೇಹುಗಾರಿಕೆ ನಡೆಸಲು ಯತ್ನಿಸಿದ್ದ ಇಬ್ಬರು ಪಾಕಿಸ್ತಾನದ ಅಧಿಕಾರಿಗಳನ್ನು ರೆಡ್​ ಹ್ಯಾಂಡಾಗಿ ಹಿಡಿದು ವಿಚಾರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ದೆಹಲಿಯ ಸೌತ್​ ಬ್ಲಾಕ್​ ಈ ಬೆಳವಣಿಗೆಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಸ್ಥಳೀಯ ಅಧಿಕಾರಿಗಳಿಗೆ ದೂರು ನೀಡಿದೆ. ಪಾಕ್​ ವಿದೇಶಾಂಗ ಇಲಾಖೆ ಈ ನಾಪತ್ತೆ ಪ್ರಕರಣವನ್ನು ಕೈಗೆತ್ತಿಕೊಂಡಿದೆ.

ಈ ಘಟನೆಯಿಂದಾಗಿ ಪಾಕ್​ ಹಾಗೂ ಭಾರತದ ಸಂಬಂಧಗಳು ಮತ್ತಷ್ಟು ಬಿಗಡಾಯಿಸುವ ಸಾಧ್ಯತೆಯಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.