ETV Bharat / bharat

ಜೈಶ್-ಎ-ಮೊಹಮ್ಮದ್ ಸಂಘಟನೆಯ ಇಬ್ಬರು ಉಗ್ರರ ಬಂಧನ - Kupwara

ಭದ್ರತಾ ಸಿಬ್ಬಂದಿ ಹಾಗೂ ಜಮ್ಮು- ಕಾಶ್ಮೀರ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಕುಪ್ವಾರಾ ಜಿಲ್ಲೆಯಲ್ಲಿ ಜೈಶ್-ಎ-ಮೊಹಮ್ಮದ್ ಸಂಘಟನೆಯ ಇಬ್ಬರು ಉಗ್ರರನ್ನು ಬಂಧಿಸಲಾಗಿದೆ.

Jaish-e-Mohammed
ಉಗ್ರರ ಬಂಧನ
author img

By

Published : Sep 10, 2020, 1:53 PM IST

ಕುಪ್ವಾರಾ: ಭದ್ರತಾ ಪಡೆಗಳ ಭರ್ಜರಿ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾದಲ್ಲಿ ಜೈಶ್-ಎ-ಮೊಹಮ್ಮದ್ (JeM) ಸಂಘಟನೆಯ ಇಬ್ಬರು ಉಗ್ರರನ್ನು ಬಂಧಿಸಲಾಗಿದೆ.

ಬಂಧಿತ ಉಗ್ರರಿಂದ ಎರಡು ಗ್ರೆನೇಡ್​ಗಳು​, ಒಂದು ಎಕೆ 47 ರೈಫಲ್​​, ಸೇರಿದಂತೆ ಶಸ್ತ್ರಾಸ್ತ್ರಗಳು ಹಾಗೂ 7 ಲಕ್ಷ ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಜಮ್ಮು- ಕಾಶ್ಮೀರ ಪೊಲೀಸರು ಮಾಹಿತಿ ನೀಡಿದ್ದಾರೆ.

ಕುಪ್ವಾರಾ ಜಿಲ್ಲೆಗೆ ಉಗ್ರರು ಭೇಟಿ ನೀಡುತ್ತಿದ್ದಾರೆಂಬ ನಿಖರ ಮಾಹಿತಿ ಮೇರೆಗೆ ಭದ್ರತಾ ಸಿಬ್ಬಂದಿ ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ಆರಂಭಿಸಿದ್ದು, ಇಬ್ಬರು ಉಗ್ರರನ್ನು ಬಂಧಿಸುವಲ್ಲಿ​ ಯಶಸ್ವಿಯಾಗಿದ್ದಾರೆ. ತನಿಖೆ ಮುಂದುವರೆದಿದ್ದು, ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.