ETV Bharat / bharat

ಯೋಧರ ಸಾವಿಗೆ ಸೇನೆಯಿಂದ ತಕ್ಕ ಪ್ರತ್ಯುತ್ತರ: ಇಬ್ಬರು ಉಗ್ರರ ಹತ್ಯೆ - ಬಾರಾಮುಲ್ಲಾ

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ನಡೆದ ಎನ್​ಕೌಂಟರ್​ನಲ್ಲಿ ಇಬ್ಬರು ಉಗ್ರರನ್ನು ಭದ್ರತಾ ಪಡೆ ಹೊಡೆದುರುಳಿಸಿದೆ.

Baramulla gunfight
ಯೋಧರ ಸಾವಿಗೆ ಸೇನೆ ಪ್ರತ್ಯುತ್ತರ
author img

By

Published : Aug 17, 2020, 4:39 PM IST

ಶ್ರೀನಗರ: ಇಂದು ಬೆಳಗ್ಗೆ ಉಗ್ರರ ಗುಂಡಿನ ದಾಳಿಗೆ ಇಬ್ಬರು ಸಿಆರ್​ಪಿಎಫ್​ ಯೋಧರು ಹಾಗೂ ವಿಶೇಷ ಪೊಲೀಸ್ ಅಧಿಕಾರಿಯೊಬ್ಬರು ​ಹುತಾತ್ಮರಾಗಿದ್ದರು. ಇದಕ್ಕೆ ಪ್ರತ್ಯುತ್ತರ ನೀಡಿರುವ ಭದ್ರತಾ ಪಡೆ ಎನ್​ಕೌಂಟರ್​ ನಡೆಸಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ.

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಕ್ರೀರಿ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದ ಕೇಂದ್ರ ಮೀಸಲು ಪೊಲೀಸ್​ ಪಡೆ (ಸಿಆರ್​ಪಿಎಫ್) ಸಿಬ್ಬಂದಿ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದರು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲಾಗಿದ್ದ ಇಬ್ಬರು ​ಯೋಧರು ಮತ್ತು ವಿಶೇಷ ಪೊಲೀಸ್ ಅಧಿಕಾರಿ ಹುತಾತ್ಮರಾಗಿದ್ದರು. ಬಳಿಕ ಕ್ರೀರಿ ಪ್ರದೇಶದಲ್ಲಿ ಉಗ್ರರಿಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗಿತ್ತು.

ದಾಳಿ ನಡೆಸಿದ ಉಗ್ರರ ಪೈಕಿ ಇಬ್ಬರನ್ನು ಎನ್​ಕೌಂಟರ್​ನಲ್ಲಿ ಹತ್ಯೆ ಮಾಡಲಾಗಿದ್ದು, ಉಳಿದವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಲಷ್ಕರ್​- ಎ -ತೊಯ್ಬಾ ಸಂಘಟನೆಯ ಮೂವರು ಉಗ್ರರು ಕೃತ್ಯದಲ್ಲಿ ಭಾಗಿಯಾಗಿದ್ದಾರೆಂದು ತಿಳಿದು ಬಂದಿದೆ. ಇವರನ್ನೂ ಶೀಘ್ರದಲ್ಲೇ ಹೆಡೆಮುರಿ ಕಟ್ಟಲಾಗುವುದು ಎಂದು ಜಮ್ಮು-ಕಾಶ್ಮೀರದ ಇನ್ಸ್​ಪೆಕ್ಟರ್​ ಜನರಲ್ ವಿಜಯ್​ ಕುಮಾರ್ ಹೇಳಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.