ಅನಂತನಾಗ್: ದಕ್ಷಿಣ ಕಾಶ್ಮೀರದ ಅರಣ್ಯ ಪ್ರದೇಶ ಕಂಝ್ವಾನ್ ಎಂಬಲ್ಲಿ ಉಗ್ರರ ಅಡಗುತಾಣದ ಮೇಲೆ ಇಂದು ದಾಳಿ ನಡೆಸಿರುವ ಭದ್ರತಾ ಪಡೆ ಇಬ್ಬರು ಉಗ್ರರನ್ನು ಹೊಡೆದುರುಳಿಸುವಲ್ಲಿ ಸಫಲವಾಗಿದೆ.
ಖುಂದ್ರು ಭಾಗದ ಅರಣ್ಯ ಪ್ರದೇಶದಲ್ಲಿ ಉಗ್ರರು ಅಡಗಿರುವ ಖಚಿತ ಮಾಹಿತಿ ಆಧರಿಸಿ ಭದ್ರತಾ ಪಡೆ ದಾಳಿ ನಡೆಸಿದೆ. ಯೋಧರ ಗುಂಡಿಗೆ ಇಬ್ಬರು ಉಗ್ರರು ಬಲಿಯಾಗಿದ್ದಾರೆ. ಇದೇ ಸ್ಥಳದಲ್ಲಿ ಮತ್ತಷ್ಟು ಉಗ್ರರು ಅಡಗಿದ್ದಾರೆ ಎನ್ನಲಾಗ್ತಿದ್ದು, ಸೇನೆ ದಾಳಿ ಮುಂದುವರೆಸಿದೆ.
ಇಬ್ಬರು ಉಗ್ರರು ಬಲಿಯಾಗಿರುವುದನ್ನು ಪೊಲೀಸರು ಖಚಿತಪಡಿಸಿದ್ದಾರೆ. ಆದರೆ, ಇನ್ನೂ ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿಲ್ಲ. ಸದ್ಯ ಸ್ಥಳಕ್ಕೆ ಹೆಚ್ಚುವರಿ ಪಡೆಯನ್ನು ಕರೆಸಿಕೊಳ್ಳಲಾಗಿದ್ದು,ಕಾರ್ಯಾಚರಣೆ ಮುಂದುವರೆದಿದೆ. ಉಗ್ರರು ತಪ್ಪಿಸಿಕೊಳ್ಳದಂತೆ ಭದ್ರತಾ ಪಡೆ ವ್ಯವಸ್ಥಿತ ದಾಳಿ ನಡೆಸುತ್ತಿದೆ.
ಸೋಮವಾರ ಸಂಜೆ ಹಂದ್ವಾರದ ಬಾಬಾಗುಂದ್ ಎಂಬಲ್ಲಿ 39 ವರ್ಷದ ಶಂಕಿತ ಉಗ್ರರನ್ನು ಹೊಡೆದುರುಳಿಸಿದ ನಂತರವೇ ಈ ಕಾರ್ಯಾಚರಣೆ ನಡೆದಿದೆ.