ಮುಂಬೈ: ಗುರುವಾರ ಸಂಜೆ ಅಧಿಕೃತವಾಗಿ ಅಸ್ತಿತ್ವಕ್ಕೆ ಬಂದಿರುವ ಉದ್ಧವ್ ಠಾಕ್ರೆ ಸರ್ಕಾರ ಶನಿವಾರ ತನ್ನ ಬಹುಮತ ಸಾಬೀತುಪಡಿಸಲಿದೆ ಎನ್ನುವ ಮಾಹಿತಿ ಸದ್ಯ ಲಭ್ಯವಾಗಿದೆ.
ಒಂದು ತಿಂಗಳಲ್ಲಿ ಮಹಾರಾಷ್ಟ್ರ ಜನತೆ ಗುರುವಾರ ಎರಡನೇ ಸರ್ಕಾರವನ್ನು ನೋಡಿದ್ದು, ಎನ್ಸಿಪಿ - ಶಿವಸೇನೆ-ಕಾಂಗ್ರೆಸ್ ಮಹಾಮೈತ್ರಿಕೂಟದಲ್ಲಿ ಉದ್ಧವ್ ಠಾಕ್ರೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.
ಠಾಕ್ರೆ ಮೊದಲ ಸಂಪುಟದಲ್ಲೇ ಶಿವಾಜಿ ರಾಜಧಾನಿ ಅಭಿವೃದ್ಧಿಗೆ 20 ಕೋಟಿ ರೂ. ಮಂಜೂರು
ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 105 ಸೀಟು ಗೆದ್ದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಶಿವಸೇನೆ 56, ಎನ್ಸಿಪಿ 54 ಹಾಗೂ ಕಾಂಗ್ರೆಸ್ 44 ಕ್ಷೇತ್ರ ತನ್ನದಾಗಿಸಿಕೊಂಡಿತ್ತು. ಬಿಜೆಪಿ ಮೈತ್ರಿ ಕಡಿದುಕೊಂಡು ಶಿವಸೇನೆ ಸದ್ಯ ಎನ್ಸಿಪಿ ಹಾಗೂ ಕಾಂಗ್ರೆಸ್ ಬೆಂಬಲದಿಂದ ಸರ್ಕಾರ ರಚಿಸಿದೆ.