ಹರಿದ್ವಾರ (ಉತ್ತರಾಖಂಡ್): ಕಾರ್ತಿಕ ಪೂರ್ಣಿಮೆಯ ಅಂಗವಾಗಿ ನವೆಂಬರ್ 30ರಂದು ಗಂಗಾ ನದಿಯಲ್ಲಿ ಪುಣ್ಯಸ್ನಾನಕ್ಕೆ ಸಾರ್ವಜನಿಕರಿಗೆ ಅವಕಾಶವಿಲ್ಲ ಎಂದು ಹರಿದ್ವಾರ ಜಿಲ್ಲಾಡಳಿತ ಆದೇಶ ನೀಡಿದೆ.
ಕೊರೊನಾ ಸೋಂಕಿನ ಮುಂಜಾಗ್ರತೆಯಿಂದಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ. ಭಕ್ತರು ಪುಣ್ಯ ಸ್ನಾನದಲ್ಲಿ ಭಾಗವಹಿಸದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾಡಳಿತ ಸ್ಪಷ್ಟನೆ ನೀಡಿದೆ.
ಕಾರ್ತಿಕ ಪೂರ್ಣಿಮೆಯ ಅಂಗವಾಗಿ ದೆಹಲಿ, ಹರಿಯಾಣ, ಪಂಜಾಬ್ ಮತ್ತು ಹಿಮಾಚಲ ಪ್ರದೇಶ ಸೇರಿದಂತೆ ದೇಶದ ವಿವಿಧ ಭಾಗಗಳಿಂದ ಲಕ್ಷಾಂತರ ಭಕ್ತರು ಗಂಗಾ ನದಿಯ ತೀರಕ್ಕೆ ಪ್ರತಿ ವರ್ಷ ಬರುತ್ತಾರೆ. ಆದರೆ ದೇವಾಲಯಗಳಿಗೆ ಮಾತ್ರ ಅನುಮತಿ ನೀಡಲಾಗಿದೆ.
ಗಂಗಾ ಮೇಲ್ ಕಾಲುವೆ ತಾತ್ಕಾಲಿಕ ಬಂದ್: ಹಿಂದೆಂದೂ ಕಂಡಿರದ ಕುಂಭಮೇಳಕ್ಕೆ ಸಾಕ್ಷಿಯಾಗುತ್ತಾ ಹರಿದ್ವಾರ ಕುಂಭಮೇಳ?
ಕೊರೊನಾ ಮಾರ್ಗಸೂಚಿಯನ್ನು ಗಮನದಲ್ಲಿಟ್ಟುಕೊಂಡು ಭಕ್ತರಿಗೆ ಅವಕಾಶ ನೀಡಲಾಗುತ್ತದೆ. ಪುಣ್ಯಸ್ನಾನಕ್ಕೆ ಅವಕಾಶ ನೀಡುವುದರಿಂದ ಹೆಚ್ಚಿನ ಜನದಟ್ಟಣೆಯಾಗಿ ಕೊರೊನಾ ವೈರಸ್ ಹರಡಲು ಕಾರಣವಾಗಬಹುದು ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಸಿ.ರವಿಶಂಕರ್ ಹೇಳಿದ್ದಾರೆ.
ಒಂದು ವೇಳೆ ಸರ್ಕಾರದ ಆದೇಶಗಳನ್ನು ಉಲ್ಲಂಘನೆ ಮಾಡಿದರೆ ಸಾಂಕ್ರಾಮಿಕ ಕಾಯ್ದೆ-1897 ಹಾಗೂ ವಿಪತ್ತು ನಿರ್ವಹಣಾ ಕಾಯ್ದೆ -2005ರ ಅಡಿಯಲ್ಲಿ ಶಿಕ್ಷೆ ನೀಡಲಾಗುತ್ತದೆ ಎಂದು ರವಿಶಂಕರ್ ಎಚ್ಚರಿಕೆ ನೀಡಿದ್ದಾರೆ.