ನವದೆಹಲಿ: ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಎನ್‌ಯು ಹಳೆ ವಿದ್ಯಾರ್ಥಿ ಉಮರ್ ಖಾಲಿದ್ನನ್ನು ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದು, ಮೂರು ದಿನಗಳ ಕಾಲ ವಶಕ್ಕೆ ಪಡೆದು ವಿಚಾರಣೆ ನಡೆಸಲಿದ್ದಾರೆ.
ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಮರ್ ಖಾಲಿದ್ನ್ನು ಕೆಲ ದಿನಗಳ ಹಿಂದೆ ದೆಹಲಿ ಪೊಲೀಸರ ವಿಶೇಷ ವಿಭಾಗ ಬಂಧಿಸಿ ವಿಚಾರಣೆ ನಡೆಸಿತ್ತು. ಇದಕ್ಕೂ ಮುನ್ನ ಹಲವು ಭಾರೀ ವಿಶೇಷ ವಿಭಾಗದ ಪೊಲೀಸರು ಉಮರ್ ಖಾಲಿದ್ನನ್ನು ವಿಚಾರಣೆಗೆ ಒಳಪಡಿಸಿದ್ದರು. ಕೆಲ ದಿನಗಳ ಹಿಂದೆಯಷ್ಟೆ ವಿಶೇಷ ವಿಭಾಗದ ಪೊಲೀಸರು ವಶಕ್ಕೆ ಪಡೆದು ಸತತ 11 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದರು. ಇದೀಗ, ಅಪರಾಧ ವಿಭಾಗ ವಶಕ್ಕೆ ಪಡೆದಿದೆ.
ಗಲಭೆಗೆ ಪ್ರಚೋದಿಸಿದ ಆರೋಪ :
ಜೆಎನ್‌ಯು ಹಳೆ ವಿದ್ಯಾರ್ಥಿಯಾಗಿರುವ ಉಮರ್ ಖಾಲಿದ್, ಸಿಎಎ ವಿರೋಧಿ ಪ್ರತಿಭಟನೆಯ ಸಮಯದಲ್ಲಿ ಉದ್ರೇಕಾರಿ ಭಾಷಣಗಳನ್ನು ಮಾಡಿ ಗಲಭೆಗೆ ಪ್ರಚೋದಿಸಿದರು ಎಂಬ ಆರೋಪವಿದೆ. ಈ ನಿಟ್ಟಿನಲ್ಲಿ ವಿಶೇಷ ವಿಭಾಗ ಮತ್ತು ಅಪರಾಧ ವಿಭಾಗ ಖಾಲಿದ್ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದೆ ಮತ್ತು ಸಾಕ್ಷ್ಯ ಸಂಗ್ರಹಿಸಲು ಫೋನ್ ವಶಪಡಿಸಿಕೊಂಡಿದೆ.