ನವದೆಹಲಿ: ಸಿಎಎ ಪರ- ವಿರೋಧ ಗುಂಪುಗಳ ನಡುವೆ ನಡೆದ ಹಿಂಸಾಚಾರಕ್ಕೆ ಸಂಬಂಧಪಟ್ಟಂತೆ ಜವಹರ್ಲಾಲ್ ನೆಹರು ವಿಶ್ವವಿದ್ಯಾನಿಲಯ (ಜೆಎನ್ಯು) ದ ಪೂರ್ವ ವಿದ್ಯಾರ್ಥಿ ಉಮರ್ ಖಾಲಿದ್ ಹಾಗೂ ಜಾಮಿಯಾ ಮಿಲ್ಲಿಯಾ ಇಸ್ಲಾಮಿಯ್ಯಾ (ಜೆಎಂಐ) ವಿಶ್ವವಿದ್ಯಾನಿಯಲದ ಇಬ್ಬರು ವಿದ್ಯಾರ್ಥಿಗಳ ವಿರುದ್ಧ ಕಾನೂನು ಬಾಹಿರ ಚುಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ)ಯಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಕಳೆದ ಫೆಬ್ರವರಿ ತಿಂಗಳಿನಲ್ಲಿ ದೆಹಲಿಯ ಈಶಾನ್ಯ ಭಾಗದಲ್ಲಿ ಸಿಎಎ ಪರ ಮತ್ತು ವಿರೋಧಿ ಗುಂಪುಗಳ ನಡುವೆ ಹಿಂಸಾಚಾರ ನಡೆದು 53 ಜನ ಸಾವನ್ನಪ್ಪಿದ್ದರು ಹಾಗೂ ಹಲವರು ಗಾಯಗೊಂಡಿದ್ದರು.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಜೆಎಂಐ ವಿಶ್ವವಿದ್ಯಾನಿಲಯದ ಸಮನ್ವಯ ಸಮಿತಿಯ ಮಾಧ್ಯಮ ಸಂಯೋಜಕಿ ಸಫೂರ ಝರ್ಘರ್ ಮತ್ತು ಸದಸ್ಯ ಮೀರನ್ ಹೈದರ್ ಎಂಬ ಇಬ್ಬರು ವಿದ್ಯಾರ್ಥಿಗಳನ್ನು ಈ ತಿಂಗಳ ಆರಂಭದಲ್ಲಿ ಪೊಲೀಸರು ಬಂಧಿಸಿದ್ದರು. ಉಮರ್ ಖಾಲಿದನ್ನು ಇನ್ನೂ ಬಂಧಿಸಿಲ್ಲ.