ETV Bharat / bharat

ತುರ್ತು ಸಂದರ್ಭಗಳಲ್ಲಿ ಮಾತ್ರ ಕೊರೊನಾ ಸೋಂಕಿತರನ್ನು ಇಎನ್​ಟಿ ಶಸ್ತ್ರಚಿಕಿತ್ಸೆಗೆ ಒಳಪಡಿಸಿ: ಆರೋಗ್ಯ ಸಚಿವಾಲಯ

ಇಎನ್‌ಟಿ ವೈದ್ಯರು, ಶುಶ್ರೂಷಕ ಸಿಬ್ಬಂದಿ, ಸಹಾಯಕ ಸಿಬ್ಬಂದಿ, ರೋಗಿಗಳು ಮತ್ತು ಅವರ ಪರಿಚಾರಕರಲ್ಲಿ ಕೋವಿಡ್-19 ಸೋಂಕಿನ ಹರಡುವಿಕೆಯನ್ನು ಕಡಿಮೆ ಮಾಡಲು ಕೊರೊನಾ ವೈರಸ್ ಸೋಂಕಿತ ರೋಗಿಗಳಿಗೆ ಪ್ರತ್ಯೇಕವಾಗಿ ಗೊತ್ತುಪಡಿಸಿದ ಆಪರೇಷನ್ ಥಿಯೇಟರ್‌ಗಳಲ್ಲಿ ಮಾತ್ರ ತುರ್ತು ಸಂದರ್ಭಗಳಲ್ಲಿ ಚಿಕಿತ್ಸೆ ನೀಡಬೇಕು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.

treatment
treatment
author img

By

Published : Jun 4, 2020, 12:24 PM IST

ನವದೆಹಲಿ: ಇಎನ್‌ಟಿ ಶಸ್ತ್ರಚಿಕಿತ್ಸಾ ವಿಧಾನಗಳಿಂದ ಕೋವಿಡ್-19 ಹರಡುವ ಅಪಾಯ ಹೆಚ್ಚಿರುವುದರಿಂದ, ಕೊರೊನಾ ವೈರಸ್ ಸೋಂಕಿತ ರೋಗಿಗಳಿಗೆ ಪ್ರತ್ಯೇಕವಾಗಿ ಗೊತ್ತುಪಡಿಸಿದ ಆಪರೇಷನ್ ಥಿಯೇಟರ್‌ಗಳಲ್ಲಿ ಮಾತ್ರ ತುರ್ತು ಸಂದರ್ಭಗಳಲ್ಲಿ ಚಿಕಿತ್ಸೆ ನೀಡಬೇಕು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.

ಈ ಸಂದರ್ಭದಲ್ಲಿ ಶಸ್ತ್ರಚಿಕಿತ್ಸೆಯನ್ನು 14 ದಿನಗಳವರೆಗೆ ಮುಂದೂಡಲು ಸಾಧ್ಯವದರೆ ಮುಂದೂಡಬಹುದು, ಇಲ್ಲವಾದರೆ ಕೋವಿಡ್-19ಗೆ ಗೊತ್ತುಪಡಿಸಿದ ಆಪರೇಷನ್ ಥಿಯೇಟರ್‌ನಲ್ಲಿ ಶಸ್ತ್ರಚಿಕಿತ್ಸೆ ಮಾಡಬೇಕು ಎಂದು ಸಚಿವಾಲಯ ತಿಳಿಸಿದೆ.

ಕಿವಿ, ಮೂಗು, ಗಂಟಲು (ಇಎನ್‌ಟಿ) ಚಿಕಿತ್ಸೆ ನಿಡುವವರಿಗೆ ಹೆಚ್ಚಿನ ಅಪಾಯವಿರುವುದರಿಂದ ಇಎನ್‌ಟಿ ವೈದ್ಯರು, ಶುಶ್ರೂಷಾ ಸಿಬ್ಬಂದಿ, ಸಹಾಯಕ ಸಿಬ್ಬಂದಿ, ರೋಗಿಗಳು ಮತ್ತು ಅವರ ಪರಿಚಾರಕರಲ್ಲಿ ಕೋವಿಡ್-19 ಸೋಂಕಿನ ಹರಡುವಿಕೆಯನ್ನು ಕಡಿಮೆ ಮಾಡುವ ಗುರಿಯನ್ನು ಆರೋಗ್ಯ ಸಚಿವಾಲಯ ಹೊಂದಿದೆ.

ಆಸ್ಪತ್ರೆಗೆ ದಾಖಲಿಸುವ ಮುನ್ನ ರೋಗಿಗಳನ್ನು ಕೋವಿಡ್-19 ಪರೀಕ್ಷೆಗೆ ಒಳಪಡಿಸಬೇಕು. ಕೋವಿಡ್-19 ಶಂಕಿತರು ಮತ್ತು ಸೋಂಕು ದೃಢಪಟ್ಟವರನ್ನು ಪ್ರತ್ಯೇಕವಾಗಿ ಇರಿಸಬೇಕು. ಎಲ್ಲಾ ಮುನ್ನೆಚ್ಚರಿಕೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೂಚಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.