ETV Bharat / bharat

ಬಿಹಾರ ವಿಧಾನಸಭೆ ಚುನಾವಣೆ-2020.. ಯುವಕರಿಗೆ ಉದ್ಯೋಗದ ಭರವಸೆಯೇ ಪ್ರಮುಖ ಅಸ್ತ್ರ - ಕಾಂಗ್ರೆಸ್‌

ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಆಡಳಿತ ಹಾಗೂ ವಿಪಕ್ಷಗಳ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿವೆ. ಗೆಲುವಿಗಾಗಿ ಎಲ್ಲಾ ಪಕ್ಷಗಳು ನಾನಾ ರೀತಿಯ ತಂತ್ರ, ಪ್ರತಿತಂತ್ರ ರೂಪಿಸುತ್ತಿವೆ..

unemployment-key-issue-in-bihar-assembly-polls-2020
ಬಿಹಾರ ವಿಧಾನಸಭೆ ಚುನಾವಣೆ-2020: ಯುವಕರಿಗೆ ಉದ್ಯೋಗದ ಭರವಸೆಯೇ ಪ್ರಮುಖ ಅಸ್ತ್ರ
author img

By

Published : Sep 28, 2020, 4:52 PM IST

ಪಾಟ್ನಾ : ಅಕ್ಟೋಬರ್‌-ನವೆಂಬರ್‌ನಲ್ಲಿ ಬಿಹಾರ ವಿಧಾನಸಭೆ ಚುನಾವಣೆ ನಡೆಯಲಿದೆ. ಯಾವುದೇ ಪಕ್ಷಕ್ಕೆ ಸಷ್ಟ ಬಹುಮತ ಬರುವ ಸಾಧ್ಯತೆ ತೀರಾ ಕಡಿಮೆ. ಎಲ್ಲಾ ಪಕ್ಷಗಳು ವಿವಿಧ ಭರವಸೆಗಳನ್ನು ನೀಡುವ ಮೂಲಕ ಬಿಹಾರ ಗದ್ದುಗೆ ಏರಲು ನಾನಾ ರೀತಿಯ ಕಸರತ್ತು ನಡೆಸುತ್ತಿವೆ.

ಚುನಾವಣೆಗೆ ದಿನಾಂಕ ಘೋಷಣೆ ಮಾಡಿದ ದಿನದಂದೇ ಸುದ್ದಿಗೋಷ್ಠಿ ನಡೆಸಿದ್ದ ಆಡಳಿತ ಪಕ್ಷ ಜೆಡಿಯು ನಾಯಕ ಹಾಗೂ ಬಿಹಾರದ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಹಲವು ಘೋಷಣೆಗಳನ್ನು ಮಾಡಿದ್ದಾರೆ. ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌ ಕೂಡ ತಾವು ಅಧಿಕಾರಕ್ಕೆ ಬಂದ್ರೆ ಏನೆಲ್ಲಾ ಯೋಜನೆಗಳನ್ನು ಜಾರಿಗೆ ತರುತ್ತೇವೆ ಎಂಬುದನ್ನು ಜನರ ಮುಂದಿಟ್ಟಿದ್ದಾರೆ.

ಈ ಎರಡೂ ಪ್ರಮುಖ ಪಕ್ಷಗಳು ನಿರುದ್ಯೋಗಿ ಯುವಕರಿಗೆ ಉದ್ಯೋಗದ ಭರವಸೆಯನ್ನೇ ಪ್ರಮುಖ ಅಸ್ತ್ರವನ್ನಾಗಿಸಿಕೊಂಡಿವೆ. ಬಿಹಾರದಲ್ಲಿ ಜೆಡಿಯು ಹಾಗೂ ಆರ್‌ಜೆಡಿ ತಲಾ 15 ವರ್ಷಗಳ ಕಾಲ ಆಡಳಿತ ನಡೆಸಿವೆ. ನಿತೀಶ್‌ಕುಮಾರ್‌ '7 ಪ್ರತಿಜ್ಞೆಗಳ ಭಾಗ-2' ಇವುಗಳನ್ನು ಈಡೇರಿಸುವುದಾಗಿ ಹೇಳಿದ್ದಾರೆ. ಜೊತೆಗೆ 'ಯುವ ಶಕ್ತಿ ಬಿಹಾರ್‌ ಕಿ ಪ್ರಗತಿ' ಎಂಬ ಕಾರ್ಯಕ್ರಮದ ಮೂಲಕ ರಾಜ್ಯದ ಯುವಕರನ್ನು ಪರೀಕ್ಷೆಗಳಿಗೆ ಸಿದ್ಧಗೊಳಿಸುವ ಯೋಜನೆ ಹಾಕಿ ಕೊಂಡಿದ್ದಾರೆ.

ಕೌಶಲ್ಯ ಅಭಿವೃದ್ಧಿ ಯೋಜನೆಯನ್ನು ಪ್ರತಿ ಜಿಲ್ಲೆಯಲ್ಲಿ ಆಯೋಜಿಸಿ ಯುವಕರಿಗೆ ಕೌಶಲ್ಯ ತರಬೇತಿ ನೀಡುವುದು. ಕೈಗಾರಿಕೋಮದ್ಯಮಗಳಿಗೆ ಅಗತ್ಯ ನೆರವು ನೀಡಿ ಯುವಕರಿಗೆ ಹೆಚ್ಚು ಕೆಲಸಗಳನ್ನು ಸೃಷ್ಟಿಸುವ ಭರವಸೆ ನೀಡಿದ್ದಾರೆ. ಆರ್‌ಜೆಡಿ ನಾಯಕರು ಕೂಡ ಇಂತಹ ಕಾರ್ಯಕ್ರಮಗಳಿಂದ ಹಿಂದುಳಿದಿಲ್ಲ. ಕಳೆದ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿರುವ ತೇಜಸ್ವಿ ಯಾದವ್‌, ಅಧಿಕಾರಕ್ಕೆ ಬಂದ ಎರಡೇ ತಿಂಗಳಲ್ಲಿ 10 ಲಕ್ಷ ಜನರಿಗೆ ಸರ್ಕಾರಿ ಉದ್ಯೋಗ ನೀಡುವುದಾಗಿ ಹೇಳಿದ್ದಾರೆ.

ಜೊತೆಗೆ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆಯೂ ಮಾಹಿತಿ ನೀಡಿದ್ದಾರೆ. ಆರ್‌ಜೆಡಿ ಅಧಿಕಾರಕ್ಕೆ ಬಂದರೆ ಮೊದಲ ಸಚಿವ ಸಂಪುಟ ಸಭೆಯಲ್ಲೇ 10 ಮಂದಿಗೆ ಉದ್ಯೋಗ ನೀಡುತ್ತೇವೆ ಎಂದಿದ್ದಾರೆ. ನಮ್ಮ ಪಕ್ಷ ಆಡಳಿತದ ಚುಕ್ಕಾಣಿ ಹಿಡಿದರೆ ಸರ್ಕಾರದಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಭರ್ತಿ ಮಾಡುತ್ತೇವೆ ಎಂಬ ಭರವಸೆ ನೀಡಿದ್ದಾರೆ. ರಾಜಕೀಯ ವಿಶ್ಲೇಷಕರಾದ ಅಜಯ್‌ಕುಮಾರ್‌, ಈ ನಾಯಕರ ಆಶ್ವಾಸನೆಗಳ ಬಗ್ಗೆ ಪ್ರತಿಕ್ರಿಯಿಸಿ, ಇಂತಹ ಪ್ರಣಾಳಿಕೆ, ಭರವಸೆಗಳು ಇದೇ ಮೊದಲಲ್ಲ. ಈ ಹಿಂದೆ ಚುನಾವಣೆ ಘೋಷಣೆಯಾದಾಗಲೂ ಇದೇ ರೀತಿ ಭರವಸೆ ನೀಡಿದ್ದಾರೆ ಎಂದು ವಿವರಿಸುತ್ತಾರೆ.

ಕೋವಿಡ್‌ ವೈರಸ್‌ನಿಂದಾಗಿ ಲಕ್ಷಾಂತರ ಮಂದಿ ವಲಸೆ ಕಾರ್ಮಿಕರು ರಾಜ್ಯಕ್ಕೆ ವಾಪಸ್‌ ಆಗಿದ್ದಾರೆ. ಕಳೆದ ಹಲವು ತಿಂಗಳುಗಳಿಂದ ವಿರೋಧ ಪಕ್ಷ ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆ ಎತ್ತಿದೆ. ಇದಕ್ಕೆ ಕೌಂಟರ್‌ ನೀಡಿರುವ ಆಡಳಿತ ಪಕ್ಷ ಜನರಿಗೆ ಉದ್ಯೋಗ ನೀಡುವ ಭರವಸೆ ನೀಡುತ್ತಿದೆ ಎಂದು ಕುಮಾರ್‌ ಹೇಳಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.