ನವದೆಹಲಿ: 2021-22ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಯಾಗಿದ್ದು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೆಲವೊಂದು ವಲಯಗಳಿಗೆ ಹೆಚ್ಚುವರಿ ಅನುದಾನ ನೀಡಿದ್ದಾರೆ. ಇದರ ಬೆನ್ನಲ್ಲೇ ಇದೇ ವರ್ಷ ಕೆಲವೊಂದು ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಆ ರಾಜ್ಯಗಳಿಗೆ ಭರ್ಜರಿ ಉಡುಗೊರೆ ನೀಡಲಾಗಿದೆ.
ಇದನ್ನೂ ಓದಿ: ಸುಸ್ತಿ ಸಾಲ ವಸೂಲಿಗೆ 'ಬ್ಯಾಡ್ ಬ್ಯಾಂಕ್' ಸ್ಥಾಪನೆ; ನಿರ್ಮಲಾ ಸೀತಾರಾಮನ್
ತಮಿಳುನಾಡು, ಪಶ್ಚಿಮ ಬಂಗಾಳ, ಕೇರಳ, ಅಸ್ಸೋಂಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ನಾಲ್ಕು ರಾಜ್ಯಗಳಿಗೂ ಭಾರೀ ಅನುದಾನ ಲಭ್ಯವಾಗಿದೆ. ತಮಿಳುನಾಡಿನಲ್ಲಿ 3,500 ಕಿ.ಮೀ. ಕಾರಿಡಾರ್ ಯೋಜನೆ, ಕೇರಳದಲ್ಲಿ 1,100 ಕಿ.ಮೀ. ರಸ್ತೆ ನಿರ್ಮಾಣಕ್ಕೆ 65,000 ಕೋಟಿ ರೂಪಾಯಿ, ಅಸ್ಸೋಂನಲ್ಲಿ 1,300 ಕಿ.ಮೀ. ರಸ್ತೆ ನಿರ್ಮಾಣಕ್ಕೆ 34 ಸಾವಿರ ಕೋಟಿ ಅನುದಾನ ನೀಡಲಾಗಿದೆ. ಇದರ ಜತೆಗೆ ಪಶ್ಚಿಮ ಬಂಗಾಳದಲ್ಲಿ 675 ಕಿ.ಮೀ. ರಸ್ತೆ ನಿರ್ಮಾಣಕ್ಕೆ 95,000 ಕೋಟಿ ರೂಪಾಯಿ ಘೋಷಣೆ ಮಾಡಲಾಗಿದೆ.
ತಮಿಳುನಾಡಿನಲ್ಲಿ 1.30 ಲಕ್ಷ ಕೋಟಿ ವೆಚ್ಚದಲ್ಲಿ ಹೆದ್ದಾರಿ ನಿರ್ಮಾಣವಾಗಲಿದ್ದು, ಇದರಲ್ಲಿ ಮಧುರೈ-ಕೊಲ್ಲಂ, ಚಿತ್ತೂರು-ಕೊಚ್ಚೂರು ಕಾರಿಡಾರ್ ಸೇರಿಕೊಂಡಿದೆ.