ETV Bharat / bharat

ಬಿಹಾರ ಚುನಾವಣೆ ಬಳಿಕ ಮೊದಲ ಕೇಂದ್ರ ಸಚಿವ ಸಂಪುಟ ಸಭೆ: ಯಾವೆಲ್ಲ ನಿರ್ಧಾರ ಕೈಗೊಳ್ಳಬಹುದು?

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಇಂದು ಕೇಂದ್ರ ಸಚಿವ ಸಂಪುಟ ಸಭೆ ನಡೆಯಲಿದ್ದು, ಬಿಹಾರ ಚುನಾವಣೆ ಮುಕ್ತಾಯದ ಬಳಿಕ ನಡೆಯುತ್ತಿರುವ ಸಭೆಯಾಗಿರುವ ಕಾರಣ ಮತ್ತಷ್ಟು ಮಹತ್ವ ಪಡೆದುಕೊಂಡಿದೆ.

author img

By

Published : Nov 11, 2020, 10:12 AM IST

Updated : Nov 11, 2020, 10:20 AM IST

cabinet meet
cabinet meet

ನವದೆಹಲಿ: ವಿಡಿಯೋ ಕಾನ್ಫರೆನ್ಸ್​​​ ಮೂಲಕ ಇಂದು ಕೇಂದ್ರ ಸಚಿವ ಸಂಪುಟ ಸಭೆ ನಡೆಯಲಿದೆ. ಆದರೆ ಸಂಪುಟ ಸಭೆಯ ಕಾರ್ಯಸೂಚಿ ಏನು ಎಂದು ಇಲ್ಲಿಯವರೆಗೆ ತಿಳಿದು ಬಂದಿಲ್ಲ. ಬಿಹಾರದಲ್ಲಿನ ವಿಧಾನಸಭೆ ಚುನಾವಣೆ ಜತೆಗೆ ಮಧ್ಯಪ್ರದೇಶ, ಕರ್ನಾಟಕ ಸೇರಿ 10 ರಾಜ್ಯಗಳಲ್ಲಿ ನಡೆದ ಉಪ ಚುನಾವಣೆಗಳಲ್ಲಿ ಎನ್​​ಡಿಎ ಮೈತ್ರಿಕೂಟ ಹಾಗೂ ಬಿಜೆಪಿ ಕಮಾಲ್​ ಮಾಡಿರುವ ಹಿನ್ನೆಲೆಯಲ್ಲಿ ಇಂದಿನ ಸಭೆ ಭಾರಿ ಮಹತ್ವ ಪಡೆದುಕೊಂಡಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಈ ಹಿಂದೆ ನವೆಂಬರ್​ 4 ರಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಕೆಲವು ಮಹತ್ವದ ನಿರ್ಧಾರಗಳನ್ನ ಕೈಗೊಳ್ಳಲಾಗಿತ್ತು.ಆರೋಗ್ಯ ಮತ್ತು ಔಷಧ ಕ್ಷೇತ್ರದಲ್ಲಿ ಸಹಕಾರ ಕುರಿತು ಭಾರತ ಮತ್ತು ಇಸ್ರೇಲ್ ನಡುವೆ ತಿಳಿವಳಿಕೆ ಒಪ್ಪಂದಕ್ಕೆ ಸಹಿ ಹಾಕಿತ್ತು.

ಅಷ್ಟೇ ಅಲ್ಲ ದೂರಸಂಪರ್ಕ/ಮಾಹಿತಿ ಮತ್ತು ಸಂವಹನ ತಂತ್ರಜ್ಞಾನಗಳ (ಐಸಿಟಿ) ಸಹಕಾರ ಕುರಿತು ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯ ಮತ್ತು ಯುನೈಟೆಡ್ ಕಿಂಗ್‌ಡಮ್ ಸರ್ಕಾರದ ಡಿಜಿಟಲ್, ಸಂಸ್ಕೃತಿ, ಮಾಧ್ಯಮ ಮತ್ತು ಕ್ರೀಡಾ ಇಲಾಖೆ (ಡಿಸಿಎಂಎಸ್) ನಡುವಣ ಒಪ್ಪಂದಗಳಿಗೆ ಸಹಿ ಹಾಕಲು ಕ್ಯಾಬಿನೆಟ್ ಅನುಮೋದನೆ ನೀಡಿತ್ತು. ಇಂದಿನ ಸಭೆಯಲ್ಲಿ ಬಿಹಾರದಲ್ಲಿ ಮುಂದಿನ ರಾಜಕೀಯ ನಡೆ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚೆ ನಡೆಸುವ ಸಾಧ್ಯತೆ ದಟ್ಟವಾಗಿದೆ ಎಂದು ಹೇಳಲಾಗುತ್ತಿದೆ.

Last Updated : Nov 11, 2020, 10:20 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.