ನವದೆಹಲಿ: ಉತ್ತರ ಪ್ರದೇಶದಲ್ಲಿ ಅತಿ ಕಡಿಮೆ ಸಂಖ್ಯೆಯಲ್ಲಿ ಕೋವಿಡ್ ಟೆಸ್ಟ್ ನಡೆಯುತ್ತಿದ್ದು, ಅದನ್ನು ಏರಿಕೆ ಮಾಡುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಸೂಚನೆ ನೀಡಿದ್ದಾರೆ.
ನವದೆಹಲಿ, ಹರಿಯಾಣ, ಉತ್ತರ ಪ್ರದೇಶದ ಮುಖ್ಯಮಂತ್ರಿಗಳೊಂದಿಗೆ ಇಂದು ವಿಡಿಯೋ ಕಾನ್ಫರೆನ್ಸ್ ನಡೆಸಿದ ಅಮಿತ್ ಶಾ, ಯೋಗಿ ಆದಿತ್ಯನಾಥ್ ಅವರಿಗೆ ಈ ಸೂಚನೆ ನೀಡಿದ್ದಾರೆ. ಉತ್ತರ ಪ್ರದೇಶದ ಗೌತಮ್ ಬುದ್ಧ ನಗರ, ಗಾಜಿಯಾಬಾದ್ನಲ್ಲಿ ಅತಿ ಕಡಿಮೆ ಟೆಸ್ಟಿಂಗ್ ನಡೆಯುತ್ತಿದ್ದರೆ, ದೆಹಲಿ ಹಾಗೂ ಗುರುಗಾಂವ್ನಲ್ಲಿ ಅತಿ ಹೆಚ್ಚು ಕೋವಿಡ್ ಟೆಸ್ಟ್ ನಡೆಸಲಾಗುತ್ತಿದೆ. ಹೀಗಾಗಿ ಯೋಗಿ ಸರ್ಕಾರದ ವಿರುದ್ಧ ಆಕ್ರೋಶಗೊಂಡಿರುವ ಅಮಿತ್ ಶಾ, ಹೆಚ್ಚಿನ ಸಂಖ್ಯೆಯಲ್ಲಿ ಪರೀಕ್ಷೆ ನಡೆಸುವಂತೆ ತಿಳಿಸಿದ್ದಾರೆ.
ಈ ವೇಳೆ ಮಾತನಾಡಿರುವ ಯೋಗಿ ಆದಿತ್ಯನಾಥ್ ಈಗಾಗಲೇ ರಿಕ್ಷಾ ಡ್ರೈವರ್, ತರಕಾರಿ ಮಾರಾಟಗಾರರು ಹಾಗೂ ಕೊರೊನಾ ವಾರಿಯರ್ಸ್ಗೆ ಟೆಸ್ಟ್ ಮಾಡಿಸಲು ಸೂಚನೆ ನೀಡಿದ್ದಾಗಿ ಹೇಳಿದ್ದಾರೆ.