ನವದೆಹಲಿ: ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೊಕ್ರಿಯಾಲ್ ಸಿಬಿಎಸ್‌ಇ, ಎನ್‌ಟಿಎ ಅಧಿಕಾರಿಗಳ ಜೊತೆ ಪರಿಶೀಲನಾ ಸಭೆ ನಡೆಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವರು, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಕಾರ್ಯದರ್ಶಿ ಅನಿತಾ ಕರ್ವಾಲ್, ಸಿಬಿಎಸ್‌ಇ ಛೇರ್ಮನ್ ಮನೋಜ್ ಅಹುಜಾ , ನೀತಿ ಆಯೋಗದ ಪ್ರಧಾನ ನಿರ್ದೇಶಕರಾದ ವಿನೀತ್ ಜೋಶಿ ಸಭೆಯಲ್ಲಿ ಭಾಗವಹಿಸಿದ್ದರು. ಶಿಕ್ಷಣದ ಪ್ರಸ್ತುತ ಸನ್ನಿವೇಶಗಳ ಬಗ್ಗೆ ಮಾತುಕತೆ ನಡೆಸಿರುವುದಾಗಿ ತಿಳಿಸಿದ್ದಾರೆ.
ಕೋವಿಡ್-19 ಮಹಾಮಾರಿಯನ್ನು ತಡೆಯಲು ಲಾಕ್‌ಡೌನ್ ವಿಧಿಸಿದ ಬಳಿಕ ಅಂದರೆ ಮಾರ್ಚ್ 25 ರಿಂದ ಶಾಲಾ-ಕಾಲೇಜುಗಳು ಹಾಗೂ ಇತರೆ ಶೈಕ್ಷಣಿಕ ಸಂಸ್ಥೆಗಳ ಚಟುವಟಿಕೆಗಳನ್ನು ಸ್ಥಗಿತಗೊಳಿಸಲಾಗಿತ್ತು.
ಅನ್‌ಲಾಕ್1ರಲ್ಲಿ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿನ ಶಿಕ್ಷಣ ಸಂಸ್ಥೆಗಳು, ತರಬೇತಿ ಕೇಂದ್ರಗಳನ್ನು ತೆರೆಯುವ ಸಂಬಂಧ ಸರ್ಕಾರಗಳಿಂದ ಸಲಹೆಗಳನ್ನು ಪಡೆಯಲಾಗುತ್ತಿದೆ. ಆ ಬಳಿಕ ಜುಲೈನಲ್ಲಿ ಶಾಲಾ-ಕಾಲೇಜುಗಳನ್ನು ತರೆಯುವ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.