ನವದೆಹಲಿ: ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಹಾಗೂ ಉಕ್ಕು ಸಚಿವ ಧರ್ಮೇಂದ್ರ ಪ್ರಧಾನ್ಗೆ ಕೊರೊನಾ ದೃಢಪಟ್ಟಿದೆ. ಸಚಿವರು ಮೇದಂತ ಆಸ್ಪತ್ರೆಯಲ್ಲಿ ದಾಖಲಾಗಿದ್ದು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ತನ್ನ ಸಿಬ್ಬಂದಿಗೂ ತಕ್ಷಣವೇ ಹೋಂ ಕ್ವಾರಂಟೈನ್ ಆಗುವಂತೆ ಸೂಚನೆ ನೀಡಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ, ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಕರ್ನಾಟಕ ಸಿಎಂ ಬಿ.ಎಸ್. ಯಡಿಯೂರಪ್ಪ, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ತಮಿಳುನಾಡು ಗವರ್ನರ್ಗೂ ಸೋಂಕು ತಗುಲಿದೆ.