ನವದೆಹಲಿ: 2017ರ ಉನ್ನಾವೋ ಅಪ್ರಾಪ್ತೆಯ ಅಪಹರಣ ಹಾಗೂ ಅತ್ಯಾಚಾರ ಪ್ರಕರಣ ಸಂಬಂಧ ಬಿಜೆಪಿ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ದೋಷಿ ಎಂದು ದೆಹಲಿ ತೀಸ್ ಹಜಾರಿ ಕೋರ್ಟ್ ಆದೇಶಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಹಾಜರಾಗಲು ಉನ್ನಾವೋ ಅತ್ಯಾಚಾರ ಸಂತ್ರಸ್ತೆ ಸಂಚರಿಸುತ್ತಿದ್ದ ಕಾರಿಗೆ ಅಪಘಾತ ಮಾಡಿ ಆಕೆ ಹತ್ಯೆಗೆ ಸಂಚು ರೂಪಿಸಿದ ಗಂಭೀರ ಆರೋಪ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಮೇಲಿದ್ದು, ಸೆಂಗಾರ್ರನ್ನು ಪ್ರಸ್ತುತ ದೆಹಲಿಯ ತಿಹಾರ್ ಜೈಲಿನಲ್ಲಿರಿಸಲಾಗಿದೆ. ಡಿ. 5ರಂದು ಸಂತ್ರಸ್ತೆ ವಿಚಾರಣೆಗೆ ಹಾಜರಾಗಲೆಂದು ತೆರಳುತ್ತಿದ್ದ ಸಂದರ್ಭ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಪ್ರಕರಣದ ಆರೋಪಿಗಳು ಆಕೆಗೆ ಬೆಂಕಿ ಹಚ್ಚಿದ್ದು, ಚಿಕಿತ್ಸೆ ಫಲಿಸದೆ ಆಕೆ ಕೊನೆಯುಸಿರೆಳೆದಿದ್ದಳು.
-
Unnao rape and kidnapping case: The court has acquitted another accused Shashi Singh. https://t.co/gMTNMBbOtP
— ANI (@ANI) December 16, 2019 " class="align-text-top noRightClick twitterSection" data="
">Unnao rape and kidnapping case: The court has acquitted another accused Shashi Singh. https://t.co/gMTNMBbOtP
— ANI (@ANI) December 16, 2019Unnao rape and kidnapping case: The court has acquitted another accused Shashi Singh. https://t.co/gMTNMBbOtP
— ANI (@ANI) December 16, 2019
ಪ್ರಕರಣ ಸಂಬಂಧ ಡಿಸೆಂಬರ್ 16ಕ್ಕೆ ದೆಹಲಿ ಕೋರ್ಟ್ ತೀರ್ಪು ಕಾಯ್ದಿರಿಸಿತ್ತು. ಇದೀಗ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಇನ್ನು ಆರೋಪಿಗೆ ಡಿಸೆಂಬರ್ 19ರಂದು ಕೋರ್ಟ್ ಶಿಕ್ಷೆಯ ಪ್ರಮಾಣ ವಿಧಿಸಲಿದೆ. ಇದೇ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪ ಎದುರಿಸುತ್ತಿದ್ದ ಮತ್ತೋರ್ವ ಶಶಿ ಸಿಂಗ್ ಅವರನ್ನ ನ್ಯಾಯಾಲಯ ಖುಲಾಸೆಗೊಳಿಸಿದೆ.