ನವದೆಹಲಿ: 2017ರ ಉನ್ನಾವೋ ಅತ್ಯಾಚಾರ ಪ್ರಕರಣ ಸಂಬಂಧ ಬಿಜೆಪಿ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ವಿರುದ್ಧ ದೆಹಲಿ ನ್ಯಾಯಾಲಯ ಇಂದು ತೀರ್ಪು ಪ್ರಕಟಿಸುವ ಸಾಧ್ಯತೆ ಇದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಹಾಜರಾಗಲು ಉನ್ನಾವೋ ಅತ್ಯಾಚಾರ ಸಂತ್ರಸ್ತೆ ಸಂಚರಿಸುತ್ತಿದ್ದ ಕಾರಿಗೆ ಅಪಘಾತ ಮಾಡಿ ಆಕೆ ಹತ್ಯೆಗೆ ಸಂಚು ರೂಪಿಸಿದ ಗಂಭೀರ ಆರೋಪ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಮೇಲಿದ್ದು, ಸೆಂಗಾರ್ರನ್ನು ಪ್ರಸ್ತುತ ದೆಹಲಿಯ ತಿಹಾರ್ ಜೈಲಿನಲ್ಲಿರಿಸಲಾಗಿದೆ.
ಡಿ. 5ರಂದು ಸಂತ್ರಸ್ತೆ ವಿಚಾರಣೆಗೆ ಹಾಜರಾಗಲೆಂದು ತೆರಳುತ್ತಿದ್ದ ಸಂದರ್ಭ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಪ್ರಕರಣದ ಆರೋಪಿಗಳು ಆಕೆಗೆ ಬೆಂಕಿ ಹಚ್ಚಿದ್ದು, ಚಿಕಿತ್ಸೆ ಫಲಿಸದೆ ಆಕೆ ಕೊನೆಯುಸಿರೆಳೆದಿದ್ದಳು. ಪ್ರಕರಣ ಸಂಬಂಧ ಡಿಸೆಂಬರ್ 16ಕ್ಕೆ ದೆಹಲಿ ಕೋರ್ಟ್ ತೀರ್ಪು ಕಾಯ್ದಿರಿಸಿತ್ತು. ಇಂದು ನ್ಯಾಯಾಲಯ ತೀರ್ಪು ಪ್ರಕಟಿಸಲಿದ್ದು, ಕುಲದೀಪ್ ಸಿಂಗ್ರನ್ನು ಶಿಕ್ಷೆಗೆ ಒಳಪಡಿಸುವ ಸಾಧ್ಯತೆ ಹೆಚ್ಚಿದೆ.