ನವದೆಹಲಿ: ಉನ್ನಾವೋ ಅತ್ಯಾಚಾರ ಪ್ರಕರಣದ ಆರೋಪಿ ಬಿಜೆಪಿ ಉಚ್ಛಾಟಿತ ನಾಯಕ ಕುಲ್ದೀಪ್ ಸಿಂಗ್ ಸೆಂಗರ್ಗೆ ಜೀವಿತಾವಧಿ ಶಿಕ್ಷೆ ವಿಧಿಸಲಾಗಿದೆ.
ತೀಸ್ ಹಜಾರಿ ನ್ಯಾಯಾಲಯವು ಪ್ರಕರಣ ಸಂಬಂಧ ಇಂದು ತೀರ್ಪು ಪ್ರಕಟಿಸಿದೆ.
ಉನ್ನಾವೋ ಅತ್ಯಾಚಾರ ಸಂತ್ರಸ್ತೆಯನ್ನು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಆರೋಪಿಗಳು ಈಚೆಗೆ ಪೆಟ್ರೋಲ್ ಸುರಿದು ಜೀವಂತವಾಗಿ ಸುಟ್ಟಿದ್ದರು.
ಪ್ರಕರಣ ಸಂಬಂಧ ಏಪ್ರಿಲ್ 14. 2018ರಂದು ಕುಲ್ದೀಪ್ ಅವರನ್ನು ಬಂಧಿಸಲಾಗಿತ್ತು.
ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಆರೋಪದ ಮೇಲೆ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಲಾಗಿತ್ತು.