ಬಂದಾ(ಉತ್ತರಪ್ರದೇಶ): ಮನೆಯಲ್ಲಿ ಯಾರು ಇಲ್ಲದ ವೇಳೆ ಯುವತಿಯ ಮೇಲೆ ಇಬ್ಬರು ಕಾಮುಕರು ಅತ್ಯಾಚಾರ ನಡೆಸಿರುವ ಘಟನೆ ಉತ್ತರಪ್ರದೇಶದ ಬಂದಾ ಜಿಲ್ಲೆಯಲ್ಲಿ ನಡೆದಿದೆ.
ಮನೆಯಲ್ಲಿ ಯಾರು ಇಲ್ಲದ ವೇಳೆ ಒಳಗೆ ಹೋಗಿರುವ ಅವರು, ಯುವತಿಯನ್ನ ಅಪಹರಣ ಮಾಡಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಈ ಕೃತ್ಯವೆಸಗಿದ್ದಾರೆ ಎನ್ನಲಾಗಿದೆ. ಲಭ್ಯವಾಗಿರುವ ಮಾಹಿತಿ ಪ್ರಕಾರ ಸಲೀಂ ಹಾಗೂ ಇಸ್ಲಾಂ ಎಂಬ ಇಬ್ಬರು ಕಾಮುಕರು ಈ ಕೃತ್ಯವೆಸಗಿದ್ದು, ಯುವತಿಯ ಮನೆಯ ಪಕ್ಕದಲ್ಲೇ ಇವರು ವಾಸವಾಗಿದ್ದರಂತೆ.
ಈಗಾಗಲೇ ಘಟನೆಗೆ ಸಂಬಂಧಿಸಿದಂತೆ ಸಂತ್ರಸ್ತೆ ಕುಟುಂಬಸ್ಥರು ನೀಡಿರುವ ದೂರಿನನ್ವಯ ಪ್ರಕರಣ ದಾಖಲಾಗಿದ್ದು, ತಲೆಮರೆಸಿಕೊಂಡಿರುವ ಇಬ್ಬರು ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ. ಇನ್ನು ಯುವತಿಯನ್ನ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದ್ದು, ಆಕೆ ಚೇತರಿಸಿಕೊಳ್ಳುತ್ತಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.