ETV Bharat / bharat

ಕೇಜ್ರಿವಾಲ್ ಮತ್ತು ಬೆಂಬಲಿಗರು ರಾಜ್ಯದಲ್ಲಿ ಅರಾಜಕತೆ ಸೃಷ್ಟಿಸುತ್ತಿದ್ದಾರೆ: ಯೋಗಿ ಆದಿತ್ಯನಾಥ್​

ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್ ಮತ್ತು ಅವರ ಬೆಂಬಲಿಗರು ಶಾಹಿನ್ ಬಾಗ್​ನಲ್ಲಿ ನಡೆಯುತ್ತಿರುವ ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ) ವಿರುದ್ಧದ ಪ್ರತಿಭಟನೆಗಳನ್ನು ಆಯೋಜಿಸುವ ಮೂಲಕ ರಾಜ್ಯದಲ್ಲಿ ಅರಾಜಕತೆ ಸೃಷ್ಟಿಸಲು ಪ್ರಯತ್ನಸುತ್ತಿದ್ದಾರೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಕಿಡಿಕಾರಿದ್ದಾರೆ.

ಯೋಗಿ ಆದಿತ್ಯನಾಥ್​
ಯೋಗಿ ಆದಿತ್ಯನಾಥ್​
author img

By

Published : Feb 2, 2020, 8:00 PM IST

ನವದೆಹಲಿ: ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್ ಮತ್ತು ಅವರ ಬೆಂಬಲಿಗರು ಶಾಹಿನ್ ಬಾಗ್​ನಲ್ಲಿ ನಡೆಯುತ್ತಿರುವ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧದ ಪ್ರತಿಭಟನೆಗಳನ್ನು ಆಯೋಜಿಸುವ ಮೂಲಕ ರಾಜ್ಯದಲ್ಲಿ ಅರಾಜಕತೆ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಕಿಡಿಕಾರಿದ್ದಾರೆ.

ದೆಹಲಿಯ ಬದ್ರಾಪುರ್​ ಪ್ರದೇಶದಲ್ಲಿ ನಡೆದ ಬಿಜೆಪಿ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ದೆಹಲಿ ವಿಧಾನಸಭಾ ಚುನಾವಣೆ ಹಿನ್ನೆಲೆ ಬಿಜೆಪಿ, ಕಾಂಗ್ರೆಸ್​ ಮತ್ತು ಎಎಪಿ ಪಕ್ಷಗಳು ಬಿರುಸಿನ ಪ್ರಚಾರ ಕೈಗೊಂಡಿದ್ದು, ಪರಸ್ಪರ ಅರೋಪ ಪ್ರತ್ಯಾರೋಪದಲ್ಲಿ ತೊಡಗಿದೆ.

ದೆಹಲಿಯ ಶಾಹಿನ್​ ಬಾಗ್​ನಲ್ಲಿ 2019 ಡಿಸೆಂಬರ್​ 15ರಿಂದ ಸಿಎಎ ಮತ್ತು ಎನ್​ಪಿಆರ್​ ವಿರುದ್ಧ ಮಹಿಳೆಯರು, ಮಕ್ಕಳು ಸೇರಿದಂತೆ ನೂರಾರು ಜನರು ವಿವಿಧ ಸಂಘಟನೆಗಳ ನೇತೃತ್ವದಲ್ಲಿ ನಿರಂತರ ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ.​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.